ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಇಲ್ಲಿದೆ ಲೇಟೆಸ್ಟ್ ಅಪ್ಡೇಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕೊರೊನಾ ಪ್ರಕರಣದಿಂದ ಮುಂದೂಡಿಕೆಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೇ ತಿಂಗಳ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.ಲಾಕ್​ಡೌನ್​ ತೆರವಾದ ಬಳಿಕವಷ್ಟೇ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದರು.

ಇದೀಗ ಮೇ 4 ಅಥವಾ‌ 5 ರಂದು ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಹಿಂದಿನ ವೇಳಾಪಟ್ಟಿಯಂತೆ ಏಪ್ರಿಲ್ 9ರಿಂದ ಎಸ್​ಎಸ್​ಎಲ್​​ಸಿ ಪರೀಕ್ಷೆಗಳು ಆರಂಭವಾಗಬೇಕಾಗಿತ್ತು. ಆದ್ರೆ ಕೇಂದ್ರ ಸರ್ಕಾರದ ಲಾಕ್‌ಡೌನ್ ಆದೇಶದ ಹಿನ್ನೆಲೆಯಲ್ಲಿ, ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದರ ಬಗ್ಗೆ ಈಗಾಗಲೇ ನಾಲ್ಕೈದು ಬಾರಿ ಸುರೇಶ್‌ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸದ್ಯ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಯಾಗುತ್ತಿದೆ. ಅದ್ರೆ ಸಂಪೂರ್ಣವಾಗಿ ಲಾಕ್‌ಡೌನ್ ಆದೇಶವನ್ನು ಹಿಂಪಡೆದಿಲ್ಲ.

ಹೀಗಾಗಿ ರಾಜ್ಯದಲ್ಲಿ ಮೇ 3ರವರೆಗೆ ಲಾಕ್‌ಡೌನ್ ಇರಲಿದೆ. ಮೇ 3ರ ನಂತರ ಮತ್ತೊಮ್ಮೆ ಸಚಿವರ ನೇತೃತ್ವದಲ್ಲಿ ಸಭೆ ಸೇರಿ ಪರೀಕ್ಷೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಮೇ‌ 4‌ ಅಥವಾ ಮೇ‌ 5ರಂದು ಅಧಿಕೃತವಾಗಿ ಸಚಿವರು ಸಭೆ ಮುಗಿಸಿ, ವೇಳಾಪಟ್ಟಿ ಬಿಡುಗಡೆಗೊಳಿಸಬಹುದು ಎನ್ನಲಾಗಿದೆ.

Facebook Comments

Sri Raghav

Admin