ಬ್ರೇಕಿಂಗ್ : ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.28- ಕೊರೊನಾ ಭೀತಿ ನಡುವೆಯೇ 9 ಮತ್ತು 10ನೇ ತರಗತಿ ಆರಂಭಿಸಿರುವ ರಾಜ್ಯ ಸರ್ಕಾರ ಈಗ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾ ಪಟ್ಟಿ ದಿನಾಂಕವನ್ನು ಪ್ರಕಟಿಸಿದೆ.  ಜೂನ್14 ರಿಂದ 25ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೂ.14ರಂದು ಪ್ರಥಮ ಭಾಷೆ, ಜೂ.16 ಗಣಿತ , ಜೂ.18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂ.21ರಂದು ವಿಜ್ಞಾನ , ಜೂ. 23ರಂದು ಹಿಂದಿ ಹಾಗೂ ಜೂ.25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದು ತಾತ್ಕಾಲಿಕ ಪರೀಕ್ಷಾ ವೇಳಾ ಪಟ್ಟಿಯಾಗಿದ್ದು, ಯಾವುದೇ ವಿದ್ಯಾರ್ಥಿ, ಪೋಷಕರಿಗೆ ಆಕ್ಷೇಪಗಳಿದ್ದರೇ ಫೆ.26ರೊಳಗೆ ಸಲ್ಲಿಸುವಂತೆ ಸಚಿವರು ಕೋರಿದ್ದಾರೆ. ಈ ಹಿಂದೆ ಪರೀಕ್ಷಾ ಅವ 3 ಗಂಟೆ ಇದ್ದು, ಈಗ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗಿದೆ.

ಫೆ.1ರಿಂದ 9ನೆ ತರಗತಿ ಹಾಗೂ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿವೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

Facebook Comments

Sri Raghav

Admin