ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ರಿಸಲ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.30- ಆಗಸ್ಟ್ 8ರೊಳಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಕೊಳ್ಳೆಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಮËಲ್ಯಮಾಪನ ಮುಗಿದಿದ್ದು, ಆಗಸ್ಟ್ 6 ಅಥವಾ ಆ.8ರೊಳಗೆ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಜೂನ್ 25ರಿಂದ ಜುಲೈ 3ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. 8 ಲಕ್ಷ 40 ಸಾವಿರ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಿದ್ದರು. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ರಾಜ್ಯಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿತ್ತು.

ಸವಾಲಿನ ನಡುವೆ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಪ್ರಸ್ತುತ ಮೌಲ್ಯಮಾಪನ ಮುಗಿದಿದ್ದು, ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

Facebook Comments

Sri Raghav

Admin