ತುಮಕೂರಿನಲ್ಲಿ 1093 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಗೈರು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಜೂ.26- ನಿನ್ನೆ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗಳು ಹಾಗೂ ಪೊಷಕರ ಮನವೊಲಿಸಿ ನಾಳೆ ನಡೆಯುವ ಪರೀಕ್ಷೆಗೆ ಬರಲು ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.  ಕೊರೊನಾ ಭೀತಿ ನಡುವೆಯೂ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲಾಯ ಪರೀಕ್ಷಾ ಕೇಂದ್ರಗಳಿಂದ ಒಟ್ಟು 1093 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.

ಅವರ ಕುಟುಂಬದವರನ್ನು ಸಂಪರ್ಕಿಸಿ ನಾಳೆ ನಡೆಯುವ ಪರೀಕ್ಷೆಗೆ ಹಾಜರಾಗಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಈ ಸಂಜೆಗೆ ತಿಳಿಸಿದರು. ತುಮಕೂರು ದಕ್ಷಿಣ ಜಿಲ್ಲಾಯಲ್ಲಿ 446 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲಾಯಿಂದ 161 ವಿದ್ಯಾರ್ಥಿಗಳು ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಬೇರೆ ಕಡೆಯಿಂದ ತುಮಕೂರು ದಕ್ಷಿಣ ಜಿಲ್ಲಾಗೆ 203 ವಿದ್ಯಾರ್ಥಿಗಳು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲಾಗೆ 333 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಯಾವ ಕಾರಣಕ್ಕೆ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ನಾಳೆ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಮಧುಗಿರಿ ಶೈಕ್ಷಣಿಕ ಜಿಲ್ಲಾಯ ಉಪ ನಿರ್ದೇಶಕ ರೇವಣ್ಣ ಸಿದ್ದಯ್ಯ ಮಾತನಾಡಿ, ಈಗಾಗಲೇ ನಾವು ನಿರೀಕ್ಷೆ ಮಾಡಿದಷ್ಟು ಗೈರು ಹಾಜರಿ ಆಗಿಲ್ಲ. ಅದರೂ ಈಗ ಗೈರು ಹಾಜರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಈಗಿನಿಂದಲೇ ಸಂಪರ್ಕಿಸಿ ನಾಳೆ ಪರೀಕ್ಷೆಗೆ ಹಾಜರಾಗುವಂತೆ ಮನವೊಲಿಸುವುದಾಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿ ಕೃಷ್ಣ ಮಾತನಾಡಿ, ಜಿಲ್ಲಾಯಲ್ಲಿ ನಡೆಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞಾ ಜಾರಿ ಇದೆ. ಪರೀಕ್ಷೆಗೆ ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ನಂತರ ಅಲ್ಲಿ ಅವರನ್ನು ಬಿಟ್ಟು ಹೋಗಬೇಕು. ಪೋಷಕರು ಕೇಂದ್ರಗಳ ಸುತ್ತ ದೊಂಬಿ ಮಾಡಬಾರದು ಎಂದು ಮನವಿ ಮಾಡಿದರು.

Facebook Comments