ಪರೀಕ್ಷೆ ಬರೆಯುವ SSLC ವಿದ್ಯಾರ್ಥಿಗಳಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.13- ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ನಿಗಮದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ನಿಗಮ ಅವಕಾಶ ಕಲ್ಪಿಸಿದೆ.

ಜುಲೈ 19 ಮತ್ತು 22ರಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ನಿಗಮದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ನಿಗಮ ಅನುಮತಿ ನೀಡಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮವು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ಎಲ್ಲ ಚಾಲಕ, ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚನೆ ನೀಡಲಾಗಿದೆ. ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಬಸ್ ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಬೇಕು.

ಚಾಲನಾ ಸಿಬ್ಬಂದಿ ಈ ನಿರ್ದೇಶನಗಳನ್ನು ಪಾಲಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್ ಅವರು ತಿಳಿಸಿದ್ದಾರೆ.

Facebook Comments

Sri Raghav

Admin