ಬೆಂಗಳೂರಲ್ಲಿ ಶುಕ್ರವಾರದಿಂದ ಸಂಜೆ 6ರ ನಂತರ ನಿಷೇಧಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜು.1- ಇದೇ ಶುಕ್ರವಾರದಿಂದ ನಗರದಲ್ಲಿ ಸಂಜೆ 6ರ ನಂತರ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ನಗರದಲ್ಲಿ 8 ಗಂಟೆವರೆಗೆ ಸಾರ್ವಜನಿಕರಿಗೆ ಸಂಚರಿಸಲು ಅವಕಾಶ ಇತ್ತು.

ಕೊರೊನಾ ಸೊಂಕು ಹೆಚ್ಚಾಗುತ್ತಿರುವುದರಿಂದ 6 ಗಂಟೆಯಿಂದ ನಿಷೇಧಾಜ್ಞೆ ಹೇರಲಾಗುತ್ತದೆ. ಯಾರೊಬ್ಬರೂ ಬೇಕಾಬಿಟ್ಟಿ ಓಡಾಡುವಂತಿಲ್ಲ ಎಂದು ಹೇಳಿದರು.

ಅಗತ್ಯಸೇವೆ ಹೊರತುಪಡಿಸಿ ಮತ್ಯಾವುದೇ ಅಂಗಡಿ ತೆರೆಯುವಂತಿಲ್ಲ ಎಂದು ಎಚ್ಚರಿಸಲಾಗಿದೆ.  ಶುಕ್ರವಾರದಿಂದ ಮಾಸ್ಕ್ ಧರಿಸದೆ ಸಂಚರಿಸುವವರಿಗೆ ನಗರದಲ್ಲಿ 200 ರೂ. ಗ್ರಾಮೀಣ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‍ಗಳ ಕೊರತೆ ಇದೆ ಎಂಬುದನ್ನು ಶಾಸಕ ರಾಮ್‍ದಾಸ್ ನನ್ನ ಗಮನಕ್ಕೆ ತಂದಿದ್ದಾರೆ. ಇನ್ನೆರಡು ದಿನದಲ್ಲಿ ಇದನ್ನು ಸರಿಪಡಿಸುವುದಾಗಿ ಸೋಮಶೇಖರ್ ತಿಳಿಸಿದರು.

Facebook Comments