ನ.1ಕ್ಕೆ ದಸರಾ ಖರ್ಚುವೆಚ್ಚ ಲೆಕ್ಕಚಾರ : ಎಸ್.ಟಿ.ಸೋಮಶೇಖರ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಅ.27- ಈ ಬಾರಿಯ ದಸರಾ ಖರ್ಚು ವೆಚ್ಚ ಲೆಕ್ಕವನ್ನು ನವೆಂಬರ್ ಒಂದರಂದು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ದಸರಾಗೆ 15 ಕೋಟಿ ರೂ. ಬಿಡುಗಡೆಯಾಗಿದೆ.

ಇದರಲ್ಲಿ 10 ಕೋಟಿ ರಾಜ್ಯ ಸರ್ಕಾರ ನೀಡಿದೆ. 5 ಕೋಟಿ ರೂ.ಗಳನ್ನು ಮೂಡಾ ನೀಡಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿ ದಸರಾ ವೆಚ್ಚವನ್ನು ಸಂಪೂರ್ಣವಾಗಿ ಲೆಕ್ಕ ಹಾಕಿ ನವೆಂಬರ್ ಒಂದರಂದು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದರು.

ನನ್ನ ಅವಧಿಯಲ್ಲಿ ಈ ದಸರಾದಲ್ಲಿ ಯಾವುದಕ್ಕೆ ಎಷ್ಟು ಖರ್ಚು ವೆಚ್ಚವಾಗಿದೆ. ಅದೆಲ್ಲವನ್ನು ನಾವು ನೀಡುತ್ತೇವೆ. ಹಿಂದಿನ ವರ್ಷದ ಬಾಕಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅದನ್ನು ಅವರೇ ನಿರ್ಧರಿಸಲಿದ್ದಾರೆ ಎಂದರು.

ಈ ಬಾರಿ ಅತ್ಯಂತ ಸರಳ, ಸಾಂಪ್ರದಾಯಿಕ ಹಾಗೂ ಯಶಸ್ವಿಯಾಗಿ ನಡೆಸಿದ್ದೇವೆ. ಕೋವಿಡ್ ರೀತಿ-ನಿಯಮದಂತೆ ದಸರಾ ಆಚರಣೆ ಮಾಡಿದ್ದೇವೆ. ಇದಕ್ಕೆ ಸಹಕಾರ ನೀಡಿರುವವರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.

Facebook Comments