ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ. ವೈಯಕ್ತಿಕ ನೆರವು : ಎಸ್.ಟಿ ಸೋಮಶೇಖರ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಯಶವಂತಪುರ : ಕೋವಿಡ್ ನಿಂದ ಮೃತಪಟ್ಟ ಕ್ಷೇತ್ರದ ಕಡುಬಡ ಕುಟುಂಬಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ ಆರ್ಥಿಕ
ನೆರವು ನೀಡುವುದಾಗಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಘೋಷಿಸಿದ್ದಾರೆ. ಕ್ಷೇತ್ರದ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ಹಳೇ ವಿದ್ಯಾರ್ಥಿಗಳ ಸಹಕಾರದೊಂದಿಗೆ ಆರಂಭವಾಗಲಿರುವ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರವನ್ನು ವೀಕ್ಷಣೆ ನಡೆಸಿ ನಂತರ ಮಾತನಾಡಿದರು

ಕ್ರೂರಿ ಕೊರೋನಾದಿಂದ ಬಹಳಷ್ಟು ಮಂದಿ ಪ್ರಾಣ ಕಳೆದುಕೊಳ್ಳುತ್ತಿರುವುದು ದುರ್ದೈವದ ಸಂಗತಿ ಅದರಲ್ಲೂ ತಮ್ಮ ದುಡಿಮೆಯಿಂದ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಆಧಾರಸ್ತಂಭಗಳು ಸೋಂಕಿಗೆ ಬಲಿಯಾಗಿ ಹಲವು ಕುಟುಂಬಗಳು ಅನಾಥವಾಗುತ್ತಿರುವುದನ್ನು ಮನಗಂಡು ಧನ ಸಹಾಯ ಮಾಡಲು ನಿರ್ಧರಿಸಿದ್ದೇನೆ.

ಗಟ್ಟಿಮುಟ್ಟಾಗಿದ್ದ ಯುವಕರು, ಮಧ್ಯವಯಸ್ಕರು ಮಹಾಮಾರಿಗೆ ಬಲಿಯಾಗುತ್ತಿರುವುದು ಹಲವಾರು ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿವೆ ಸಂತ್ರಸ್ತ ಕುಟುಂಬಗಳಿಗೆ ನಿರಂತರವಾಗಿ ನನ್ನ ಕೈಯಲಾದಷ್ಟು ಸಹಾಯ, ಸಹಕಾರ ನೀಡುತ್ತಿದ್ದೇನೆ. ದುಡಿದು ಸಾಕುತ್ತಿದ್ದ ಮನೆಯ ಸದಸ್ಯ ಮೃತಪಟ್ಟು ಜೀವನ ನಿರ್ವಹಣೆಗೂ ಪರದಾಟ ನಡೆಸುತ್ತಿರುವ ಕ್ಷೇತ್ರ ವ್ಯಾಪ್ತಿಯ ಆರ್ಥಿಕ ದುರ್ಬಲ ಕುಟುಂಬಗಳನ್ನು ಗುರುತಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಒಂದು ಲಕ್ಷ ರೂ ಒದಗಿಸಲಾಗುವುದು ಎಂದರು

ಕ್ಷೇತ್ರದಲ್ಲಿ ಸೋಂಕನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರು ಸಾವಿರ ಲೀಟರ್ ಸಾಮರ್ಥ್ಯದ 5 ವಾಹನಗಳ ಮುಖೇನ ಎಲ್ಲಾ ವಾರ್ಡ್ ಗಳ ಪ್ರತಿ ಬೀದಿಯಲ್ಲಿಯೂ ಸ್ವಂತ ಖರ್ಚಿನಲ್ಲಿ ಸ್ಯಾನಿಟೈಸ್ ಮಾಡಿಸಲಾಗುವುದು. ನಾಗರಿಕರ ಆರೋಗ್ಯ ರಕ್ಷಣೆಯ ಸಲುವಾಗಿ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾದವರ ಮನೆಗಳಿಗೂ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗುವುದು ಎಂದರು

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಜನರ ಜೀವರಕ್ಷಣೆಗೆ ಪೂರಕವಾಗಿ ಜ್ಞಾನಭಾರತಿಯಲ್ಲಿ ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸೂಚನೆ ಮೇರೆಗೆ ಕೋವಿಡ್ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬಿಜಿಎಸ್ ಜಿಮ್ಸ್ ನಲ್ಲಿ ಆಸ್ಪತ್ರೆಯಲ್ಲಿ ಹೆಚ್ಚುವರಿ 180 ಆಕ್ಸಿಜನ್ ಬೆಡ್ ಹಾಗೂ 10 ವೆಂಟಿಲೇಟರ್ ಬೆಡ್ ಗಳನ್ನು ಸಿದ್ದಪಡಿಸಲಾಗುತ್ತಿದೆ. ಅಲ್ಲದೆ
ವಲಯ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳೊಂದಿಗೆ
ಸಮಾಲೋಚನೆ ನಡೆಸಿ ಸರ್ಕಾರ ನಿಗದಿಪಡಿಸಿರುವ ಬೆಡ್ ಗಳನ್ನು ನೀಡಲು
ಈಗಾಗಲೇ ತಿಳಿಸಿದರು

ಪಾಲಿಕೆ ವ್ಯಾಪ್ತಿಯಂತೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸೋಂಕಿತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಬೆಂಗಳೂರು ದಕ್ಷಿಣ ತಾಲ್ಲೂಕು ಉಪ ವಿಭಾಗಾಧಿಕಾರಿ ಶಿವಣ್ಣ ಅವರನ್ನು ನೂಡಲ್ ಅಧಿಕಾರಿಯನ್ನು ನೇಮಿಸಲಾಗಿದೆ.

ಮಾಗಡಿ ಮುಖ್ಯರಸ್ತೆಯ ಜನಸೇವಾ ವಿದ್ಯಾಕೇಂದ್ರದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ತೆರೆಯಲಾಗುತ್ತಿದ್ದು ಅಗತ್ಯವಿರುವ ಮೂಲಸೌಕರ್ಯ ವೈದ್ಯಕೀಯ ವ್ಯವಸ್ಥೆ ಒದಗಿಸಿ ಶೀಘ್ರವೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವುದಾಗಿ ತಿಳಿಸಿದರು

ಕೊರೋನಾ ವಾರಿಯರ್ಸ್ ಗಳಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್
ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು
ಉಪ ವಿಭಾಗಾಧಿಕಾರಿ ಶಿವಣ್ಣ, ಡಾ. ವಿವೇಕ್ ಸೇರಿದಂತೆ ಆರ್ ಆರ್ ನಗರ ವ್ಯಾಪ್ತಿಯ ವೈದ್ಯಾಧಿಕಾರಿಗಳು ಇದ್ದರು.

Facebook Comments

Sri Raghav

Admin