ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು

ಈ ಸುದ್ದಿಯನ್ನು ಶೇರ್ ಮಾಡಿ

ವಡೋದರ, ಫೆ.24- ವಿಶ್ವದಲ್ಲೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕಗೆ ಪಾತ್ರವಾಗಿರುವ ಗುಜರಾತ್‍ನ ಮೊಟೆರಾ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ಈ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ, ಗುಜರಾತ್ ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸುಮಾರು 1,10,000 ಪ್ರೇಕ್ಷಕರು ಆಸೀನರಾಗಿ ಪಂದ್ಯ ವೀಕ್ಷಣೆ ಮಾಡುವ ಸಾಮಥ್ರ್ಯ ಹೊಂದಿರುವ ಈ ಕ್ರೀಡಾಂಗಣದಲ್ಲೇ ವಿಶ್ವದಲ್ಲೇ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೊದಲ ಮೊಟೆರಾ ಕ್ರಿಕೆಟ್ ಸ್ಟೇಡಿಯಂ ಎಂದು ಹೆಸರಿಡಲಾಗಿತ್ತು. ಆದರೆ ಇದೀಗ ಗುಜರಾತ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ನಾಮಕರಣ ಮಾಡಲು ತೀರ್ಮಾನಿಸಿದೆ.

ನಾಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುಜರಾತ್‍ನ ಗಾಂಧಿನಗರಕ್ಕೆ ಭೇಟಿ ಕೊಡಲಿದ್ದಾರೆ. ಗುಜರಾತ್ ಕೇಂದ್ರ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಲಿದ್ದಾರೆ.

ಈ ಹಿಂದೆ 1982ರಲ್ಲಿ ಅಂದಿನ ಗುಜರಾತ್ ಸರ್ಕಾರ 63 ಎಕರೆ ಜಾಗದಲ್ಲಿ ಕ್ರೀಡಾಂಗಣವನ್ನು ನಿರ್ಮಾಣ ಮಾಡಿತ್ತು. ಸುಮಾರು 49 ಸಾವಿರ ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸಬಹುದಾಗಿತ್ತು. ಆದರೆ ಇದನ್ನು ಮೇಲ್ದರ್ಜೆಗೇರಿಸಲಾಗಿದ್ದು, ಈಗ 1,10,000 ಪ್ರೇಕ್ಷಕರು ಆಸೀನಾರಾಗುವ ಸಾಮಥ್ರ್ಯ ಹೊಂದಿದೆ.

Facebook Comments