ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆಗಿಳಿದ ಸ್ಟಾಫ್ ನರ್ಸ್‍ಗಳು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.14- ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಪಾಲಿಕೆಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾಫ್ ನರ್ಸ್‍ಗಳು ಇಂದು ಪ್ರತಿಭಟನೆಗಿಳಿದಿದ್ದಾರೆ.

ಕಳೆದ ಐದು ವರ್ಷಗಳಿಂದ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನಮಗೆ ಕೇವಲ 15 ಸಾವಿರ ವೇತನ ನೀಡುತ್ತಿದ್ದು, ಯಾವುದೇ ಸೇವಾ ಭದ್ರತೆ ಇಲ್ಲ ಹಾಗೂ ವೇತನವನ್ನು ಕೂಡ ಹೆಚ್ಚಳ ಮಾಡುತ್ತಿಲ್ಲ.

ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ನಮಗೆ ಸರಿಯಾದ ಸುರಕ್ಷತೆ ಕೂಡ ಇಲ್ಲ ಎಂದು ಆರೋಪಿಸಿ ಇಂದು ನೂರಾರು ಅರೆ ವೈದ್ಯಕೀಯ ಸಿಬ್ಬಂದಿ ಪಾಲಿಕೆಯ ಕೇಂದ್ರ ಕಚೇರಿ ಗಾಜಿನ ಮನೆಯಲ್ಲಿ ಪ್ರತಿಭಟನೆ ನಡೆಸಿದರು.

ಒತ್ತಡದಲ್ಲಿ ಕೆಲಸ ಮಾಡಿದರೂ ನಮಗೆ ವೇತನ ಹೆಚ್ಚಳ ಮಾಡುತ್ತಿಲ್ಲ. ನಮ್ಮನ್ನು ಖಾಯಂ ಕೂಡ ಮಾಡುತ್ತಿಲ್ಲ. ಆದರೆ, ಹೊಸದಾಗಿ ಸೇರ್ಪಡೆಯಾಗುತ್ತಿರುವ ಸಿಬ್ಬಂದಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ.

ಪ್ರತಿದಿನ ಕೊರೊನಾ ಸೋಂಕು ಸಂಬಂಧ ಇಂತಿಷ್ಟು ಟೆಸ್ಟ್ ಮಾಡಬೇಕೆಂದು ಟಾರ್ಗೆಟ್ ನೀಡಲಾಗುತ್ತಿದೆ. ಇಷ್ಟೆಲ್ಲ ಮಾಡಿದರೂ ಕೂಡ ನಮಗೆ ಸರಿಯಾದ ಸುರಕ್ಷತೆಯ ಕಿಟ್‍ಗಳನ್ನು ಕೂಡ ನೀಡುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಇಂದಿನಿಂದ ನಾವು ನಮ್ಮ ಸೇವೆಯನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವ ಮುಷ್ಕರ ನಡೆಸಲಿದ್ದೇವೆ ಎಂದು ಅವರು ಹೇಳಿದರು.ಪಾಲಿಕೆ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 700 ಅರೆ ವೈದ್ಯಕೀಯ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ. ಈಗ ಇವರು ಪ್ರತಿಭಟನೆಗಿಳಿದರೆ ಮತ್ತಷ್ಟು ತೊಂದರೆಯಾಗಲಿದೆ.

Facebook Comments

Sri Raghav

Admin