ಬಿಬಿಎಂಪಿ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.23- ಬಿಬಿಎಂಪಿಯ 10 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರನ್ನು ಮೇಯರ್ ಗೌತಮ್‍ಕುಮಾರ್ ಅಧ್ಯಕ್ಷತೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದ ಪಟ್ಟಿ:
ಶಿಕ್ಷಣ ಸ್ಥಾಯಿ ಸಮಿತಿ- ಮಂಜುಳಾ ನಾರಾಯಣಸ್ವಾಮಿ, ನಗರ ಯೋಜನೆ ಸ್ಥಾಯಿ ಸಮಿತಿ- ಆಶಾ ಸುರೇಶ್, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ – ಎಲ್.ಶ್ರೀನಿವಾಸ್, ಅಪೀಲು ಸ್ಥಾಯಿ ಸಮಿತಿ-ಗುಂಡಣ್ಣ (ಲಕ್ಷ್ಮೀನಾರಾಯಣ), ಸಾಮಾಜಿಕ ನ್ಯಾಯ ಸಮಿತಿ-ಹನುಮಂತಯ್ಯ, ವಾರ್ಡ್ ಕಾಮಗಾರಿ ಸಮಿತಿ- ಜಿ.ಕೆ.ವೆಂಕಟೇಶ್, ಬೃಹತ್ ರಸ್ತೆ ಕಾಮಗಾರಿ ಸ್ಥಾಯಿ ಸಮಿತಿ- ಮೋಹನ್ ಕುಮಾರ್, ಆರೋಗ್ಯ ಸ್ಥಾಯಿ ಸಮಿತಿ -ಮಂಜುನಾಥ್ ರಾಜು, ಮಾರುಕಟ್ಟೆ ಸ್ಥಾಯಿ ಸಮಿತಿ – ಪದ್ಮಾವತಿ ಶ್ರೀನಿವಾಸ್, ಸಿಬ್ಬಂದಿ ಸುಧಾರಣೆ ಸ್ಥಾಯಿ ಸಮಿತಿ- ಅರುಣಾ ರವಿ ಆಯ್ಕೆಯಾಗಿದ್ದಾರೆ. ಲೆಕ್ಕಪತ್ರ, ತೋಟಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮುಂದೂಡಿಕೆಯಾಗಿದೆ.

Facebook Comments