ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್ ತಾಣದಲ್ಲಿ 129 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಜಿದಾರರು ತಮ್ಮ ತುಂಬಿದ ಅರ್ಜಿಯನ್ನು ಜೂನ್ 26ರೊಳಗೆ ಸಲ್ಲಿಸತಕ್ಕದ್ದು.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಬಿಬಿಎಸ್, ಪದವಿ, ಡಿಪ್ಲೋಮಾ, ಪಿಜಿ ಡಿಗ್ರಿ, ಅಥವಾ ಸಮಾನತೆಯನ್ನು ಪೂರೈಸಿದ ಅರ್ಜಿದಾರರು.  30 ರಿಂದ 37 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 700 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಅಂಗವಿಕಲ/ಇಡಬ್ಲ್ಯುಎಸ್/ಇಲಾಖಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
ಆರಂಭ ದಿನಾಂಕ: 06.06.2019
ಕೊನೆ ದಿನಾಂಕ : 26.06.2019

ಆಯ್ಕೆ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: https://www.sailcareers.com/media/uploads/RDS_Short_Notic_Eng_25X55cms.pdf

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ