ಬಿಗ್ ನ್ಯೂಸ್ : ಮದುವೆ, ಪಾರ್ಟಿ, ಸಮಾರಂಭಕ್ಕೆ ಅನುಮತಿ ಕಡ್ಡಾಯ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.17- ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣವನ್ನು ನಿಯಂತ್ರಿಸಲು ಜಾರಿ ಮಾಡಿರುವ ಪರಿಷ್ಕøತ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆಯನ್ನು ಸರ್ಕಾರ ನೀಡಿದೆ.

ವಿಕಾಸಸೌಧದಲ್ಲಿಂದು ಗೃಹ, ಕಂದಾಯ ಹಾಗೂ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸುಮಾರು ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಡಾ.ಕೆ.ಸುಧಾಕರ್, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಿನ್ನೆಯಷ್ಟೇ ಬಿಡುಗಡೆ ಮಾಡಿರುವ ಪರಿಷ್ಕøತ ಮಾರ್ಗಸೂಚಿಯನ್ನು ಗ್ರಾಪಂ ಹಂತದವರೆಗೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಹೊಣೆಗಾರಿಯನ್ನು ಸ್ಥಳೀಯ ಆಡಳಿತಕ್ಕೆ ನೀಡಲಾಗಿದೆ. ಮದುವೆ, ಸಮಾರಂಭ, ಧಾರ್ಮಿಕ ಚಟುವಟಿಕೆಗಳು, ಅಂತ್ಯಕ್ರಿಯೆ ಸೇರಿದಂತೆ ಸಭೆಗಳು ಸೇರಿದಂತೆ ಯಾವುದೇ ಕಾರ್ಯಕ್ರಮವನ್ನು ನಡೆಸಬೇಕಾದರೆ ಕಡ್ಡಾಯವಾಗಿ ತಹಸೀಲ್ದಾರ್ ಹಾಗೂ ಸ್ಥಳೀಯ ಆಡಳಿತದಿಂದ ಇ-ಪಾಸ್ ಪಡೆಯಲೇಬೇಕು.

Facebook Comments