ವಿದ್ಯಾರ್ಥಿ ಕ್ರಿಡಿಟ್‍ಕಾರ್ಡ್ ಯೋಜನೆಗೆ ಅನುಮೋದನೆ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ,ಜೂ.25- ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ತೃಣಮೂಲ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಗೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್‍ನಲ್ಲಿ ನಿನ್ನೆ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಗೆ ಅನುಮತಿ ದೊರೆತಿದೆ. ಪಶ್ಚಿಮ ಬಂಗಾಳದಲ್ಲಿ 10 ವರ್ಷ ಕಳೆದ ಯಾರು ಬೇಕಾದರೂ ಇದರ ಲಾಭ ಪಡೆಯಬಹುದು.

ಈ ಯೋಜನೆಯಿಂದ ಉನ್ನತ ವ್ಯಾಸಂಗಕ್ಕೆ 10 ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದೆ ಎಂದರು. ಭಾರತದಲ್ಲಿ ಅಥವಾ ವಿದೇಶದಲ್ಲಿ ಪದವಿಪೂರ್ವ, ಸ್ನಾತಕೋತ್ತರ, ಡಾಕ್ಟರೇಟ್ ಮತ್ತು ಸ್ನಾತಕೋತ್ತರ ಅಧ್ಯಯನಕ್ಕೆ ಸಾಲ ಲಭ್ಯವಿರುತ್ತದೆ ಎಂದು ತಿಳಿಸಿದರು.

ಸಂಪುಟ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಗೆ ಅನುಮತಿ ನೀಡಿದ್ದು, ಪಶ್ಚಿಮ ಬಂಗಾಳದಲ್ಲಿ 10 ವರ್ಷ ಕಳೆದ ಯಾರಾದರೂ ಅದರ ಲಾಭವನ್ನು ಪಡೆಯಬಹುದು. 40 ವರ್ಷದವರೆಗೆ ಒಬ್ಬ ವ್ಯಕ್ತಿಯು ಈ ಯೋಜನೆಗೆ ಅರ್ಹನಾಗಿರುತ್ತಾನೆ ಎಂದು ತಿಳಿಸಿದ್ದಾರೆ.

ಉದ್ಯೋಗ ಪಡೆದ ನಂತರ ಸಾಲ ಮರುಪಾವತಿಸಲು ವಿದ್ಯಾರ್ಥಿಗೆ ಹದಿನೈದು ವರ್ಷಗಳ ಕಾಲಾವಧಿ ನೀಡಲಾಗುವುದು. ಜೂನ್ 30ರಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

Facebook Comments