ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಜು.4- ಶಾಲೆ ಮುಗಿದ ನಂತರ 10ನೇ ತರಗತಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಮೂಲದ ಲಕ್ಷ್ಮಿ(15) ಮೃತಪಟ್ಟಿರುವ ವಿದ್ಯಾರ್ಥಿನಿ.  ಕಳೆದ 20 ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಗಾಡೇನಹಳ್ಳಿಯಲ್ಲಿರುವ ಲೋಯಾಲ ಶಾಲೆಗೆ ದಾಖಲಾಗಿದ್ದ ಈಕೆ ಇಲ್ಲಿನ ಹಾಸ್ಟೆಲ್‍ನಲ್ಲಿಯೇ ತಂಗುತ್ತಿದ್ದರು.

ನಿನ್ನೆ ಶಾಲೆಗೆ ಎಂದಿನಂತೆ ಬಂದಿದ್ದ ಲಕ್ಷ್ಮಿ ಶಾಲೆ ಮುಗಿದ ನಂತರ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಶಾಲೆಯಲ್ಲಿ ಪುಸ್ತಕ ಬಿಟ್ಟಿರುವುದು ನೆನಪಾಗಿ ವಾಪಸ್ ತರಗತಿಗೆ ಹೋಗಿದ್ದಾಳೆ. ಎಷ್ಟು ಹೊತ್ತಾದರೂ ಲಕ್ಷ್ಮಿ ಬಾರದಿರುವುದರಿಂದ ಗೆಳತಿಯರೇ ತರಗತಿಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಗಿ, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗಾಗಿ ದುದ್ದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  ಆತ್ಮಹತ್ಯೆ ಹಿಂದೆ ಹಲವು ಅನುಮಾನಗಳು ಮೂಡಿದ್ದು, ನೇಣುಬಿಗಿದ ಸ್ಥಿತಿಯನ್ನು ಗಮನಿಸಿದರೆ ಕೊಲೆ ಮಾಡಿರಬಹುದೆಂಬ ಶಂಕೆಯನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಮರಣೋತ್ತರ ಪರೀಕ್ಷೆ ವರದಿ ಬಂದನಂತರವಷ್ಟೇ ಸತ್ಯಾಂಶ ಹೊರಬರಬೇಕಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ