ಹುಟ್ಟುಹಬ್ಬದ ವೇಳೆ ಗುಂಡು ಹಾರಿಸಿದ ವಿದ್ಯಾರ್ಥಿ, ಇಬ್ಬರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

ಕ್ಯಾಲಿಫೋರ್ನಿಯಾ, ನ.15- ಶಾಲೆ ಕ್ಯಾಂಪಸ್‍ನಲ್ಲಿ ಹುಟ್ಟುಹಬ್ಬ ಆಚರಿಸುವ ವೇಳೆ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ಇಲ್ಲಿನ ಸಾಂತಾ ಕ್ಲಾರಿತಾದ ಸೌರಾಸ್ ಪ್ರೌಢಶಾಲೆಯಲ್ಲಿ ನಡೆದಿದೆ. ಗುಂಡು ಹಾರಿಸಿದ 16 ವರ್ಷದ ಬಾಲಕ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

16 ವರ್ಷದ ಬಾಲಕಿ ಹಾಗೂ 14 ವರ್ಷಬಾಲಕ ಗುಂಡೇಟಿನಿಂದ ಸಾವನ್ನಪ್ಪಿದ್ದು, ಇನ್ನೂ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದೇ ವರ್ಷದಲ್ಲಿ ಶಾಲೆಯಲ್ಲಿ ಗುಂಡಿನ ಸದ್ದು ಕೇಳಿದ ಪ್ರಕರಣ ಇದು 85ನೆಯದ್ದಾಗಿದೆ.

Facebook Comments