ಜೂ.20ರ ವರೆಗೂ ವಿದ್ಯಾರ್ಥಿಗಳ ಹಳೆ ಪಾಸ್‍ಗೆ ಮಾನ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.2- ಕಳೆದ 2018-19ನೆ ಸಾಲಿನಲ್ಲಿ ವಿತರಿಸಲಾಗಿದ್ದ ಸ್ಮಾರ್ಟ್‍ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸ್‍ಗಳನ್ನು ಹಾಗೂ ಶಾಲಾ-ಕಾಲೇಜುಗಳಲ್ಲಿ ಈಗ ನೀಡಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಜೂ.20ರ ವರೆಗೂ ವಿದ್ಯಾರ್ಥಿಗಳು ಬಸ್‍ಗಳಲ್ಲಿ ಪ್ರಯಾಣಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅನುಮತಿಸಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ರಿಯಾಯಿತಿ ಪಾಸ್ ವಿತರಣೆ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಎಂಟಿಸಿ ಸ್ಪಷ್ಟಪಡಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ  ಸಚಿವ ಯು.ಟಿ.ಖಾದರ್ ಅವರು, ಈಗಾಗಲೇ ಶಾಲಾರಂಭಗೊಂಡಿದ್ದರೂ ಬಸ್ ಪಾಸ್ ಸಮಸ್ಯೆ ಇದೆ. ಗ್ರಾಮಾಂತರ ಪ್ರದೇಶಗಳಲ್ಲಿ ಬಹುತೇಕವಾಗಿ ಮಕ್ಕಳು ಸರಕಾರಿ ಬಸ್ಸುಗಳನ್ನು ಉಪಯೋಗಿಸುತ್ತಿದ್ದು, ಅವರಿಗೆ ಜೂನ್ 6ರಿಂದ ಸ್ಮಾರ್ಟ್ ಕಾರ್ಡ್ ಲಭ್ಯವಾಗಲಿದೆ. ಅಲ್ಲಿಯವರೆಗೆ ಹಳೆ ಬಸ್ಸು ಪಾಸ್‌ಗಳನ್ನೇ ಉಪಯೋಗಿಸಬಹುದು. ಈ ಬಗ್ಗೆ ಸಾರಿಗೆ ಸಚಿವ ಹಾಗೂ ಮುಖ್ಯಮಂತ್ರಿ ಜತೆ ಚರ್ಚಿಸಿುವುದಾಗಿ ಸಚಿವ ಖಾದರ್ ತಿಳಿಸಿದರು.

ಸದ್ಯ ಜಿಲ್ಲೆಯ ಯಾವುದೇ ಸರಕಾರಿ ಶಾಲೆಗಳಲ್ಲಿ ನೀರಿನ ಸಮಸ್ಯೆಯಿಂದಾಗಿ ಶಾಲಾರಂಭವನ್ನು ಮುಂದೂಡಲಾಗಿಲ್ಲ. ಯಾವುದಾದರೂ ಶಾಲೆಯಲ್ಲಿ ಬಿಸಿಯೂಟ, ಅಕ್ಷರದಾಸೋಹ ಸೇರಿದಂತೆ ನೀರಿನ ಸಮಸ್ಯೆ ಇದ್ದಲ್ಲಿ ತಕ್ಷಣ ಶಾಲೆಯವರು ಸಂಬಂಧಪಟ್ಟವರ ಗಮನಕ್ಕೆ ತಂದಲ್ಲಿ ನೀರು ಒದಗಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಅಂಗನವಾಡಿಗಳಿಗೆ ತೊಂದರೆಯಾಗಲಿದೆ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಆದರೆ ಯಾವುದೇ ಕಾರಣಕ್ಕೂ ಅಂಗನವಾಡಿಗಳನ್ನು ಕಡೆಗಣಿಸಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದಿಲ್ಲ. ಮುಂದಿನ ವರ್ಷ ಎಲ್‌ಕೆಜಿ, ಯುಕೆಜಿಗಳನ್ನು ತೆರೆಯುವ ಸಂದರ್ಭ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಮುಂದುವರಿಯಲಾಗುವುದು ಎಂದು ಸಚಿವ ಖಾದರ್ ಸ್ಪಷ್ಟಪಡಿಸಿದರು.

Facebook Comments