ವಿದ್ಯಾರ್ಥಿಗಳು ಫೆ.28ರ ವರೆಗೆ ಹಳೆ ಪಾಸ್ ಬಳಸಲು ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.29- ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಯಮಗಳ ಬಸ್‍ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿದೆ. ಈ ಹಿಂದೆ ಜ.31ರವರೆಗೆ ಸಂಸ್ಥೆಯಿಂದ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಪಾಸ್‍ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕಾಲವಕಾಶ ನೀಡುವ ಸಲುವಾಗಿ ಈ ಅವಧಿಯನ್ನು ಫೆ.28ರವರೆಗೆ ಮುಂದೂಡಿದೆ.

ಎಲ್ಲ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶುಲ್ಕ ಪಾವತಿಸಿದ ರಶೀದಿ ಜೊತೆಗೆ ಸಂಬಂಧಪಟ್ಟ ಮಾರ್ಗಗಳಲ್ಲಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹೊರವಲಯ ಸಾಮಾನ್ಯ ಹಾಗೂ ವೇಗಧೂತ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕರಾರಸಾ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments