‘ಫ್ರೀ ಕಾಶ್ಮೀರ’ ಪ್ರತಿಭಟನೆಗೆ ವಿದ್ಯಾರ್ಥಿಗಳು ಅನುಮತಿ ಪಡೆದಿರಲಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜ.10- ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳು ಅನುಮತಿ ಪಡೆದಿರಲಿಲ್ಲ ಎಂದು ಕುಲಸಚಿವ ಶಿವಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ವರದಿ ನೀಡಿದ್ದಾರೆ.  ಮೈಸೂರು ವಿವಿಯಲ್ಲಿ ಮಾನಸಗಂಗೋತ್ರಿಯಲ್ಲಿ ಕೆಲವು ವಿದ್ಯಾರ್ಥಿಗಳು ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರು. ಇದು ತೀವ್ರ ವಿವಾದಕ್ಕೆ ಒಳಗಾಗಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ವರದಿ ನೀಡುವಂತೆ ಕುಲ ಸಚಿವರಿಗೆ ಸೂಚಿಸಿದ್ದರು.  ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ ಫಲ ಕಾಣಿಸಿಕೊಂಡುದ್ದರ ಬಗ್ಗೆ ಜನಪ್ರತಿನಿಧಿಗಳು, ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಹಾಗಾಗಿ ಕುಲಸಚಿವ ಶಿವಪ್ಪ ಅವರು ರಾಜ್ಯಪಾಲರಿಗೆ ವರದಿ ನೀಡಿದ್ದುವಿವಿಯಲ್ಲಿ ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ. ಅನಧಿಕೃತವಾಗಿ ಪ್ರತಿಭಟನೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Facebook Comments