ಡಿ.13ರಂದು ಸಬ್‍ ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.5- ರಿಸರ್ವ್ ಸಬ್‍ಇನ್ಸ್‍ಪೆಕ್ಟರ್ (ಸಿಎಆರ್/ಡಿಎಆರ್) ಮತ್ತು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ವೈರ್‍ಲೆಸ್) ಹುದ್ದೆಗಳ ನೇಮಕಾತಿಗಾಗಿ ಸುಮಾರು 5,800 ಅಭ್ಯರ್ಥಿಗಳಿಗೆ ಡಿ. 13ರಂದು ಬೆಂಗಳೂರು ನಗರದಲ್ಲಿನ 11 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಗಳನ್ನು ಇಲಾಖಾ ವೆಬ್‍ಸೈಟ್ www.ksp.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments