ಶ್ರೀಲಂಕಾ ಸರಣಿ ಸ್ಪೋಟದ ಬಗ್ಗೆ ಸುಬ್ರಹ್ಮಣ್ಯ ಸ್ವಾಮಿ ಹೇಳಿದ್ದೇನು ಗೊತ್ತೇ ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಏ.21- ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಸುಬ್ರಹ್ಮಣ್ಯ ಸ್ವಾಮಿಯವರು ದೇಶದ ಸುರಕ್ಷತೆಗಾಗಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ್ದಾರೆ.

ಶ್ರೀಲಂಕಾದಲ್ಲಿನ ಭಯೋತ್ಪಾದನಾ ದಾಳಿಯನ್ನು ನೋಡಿದರೆ ಆತಂಕವಾಗುತ್ತದೆ. ದಾಳಿಯಲ್ಲಿ ಐಸಿಸ್ ಕೈವಾಡವಿರುವುದು ಪತ್ತೆಯಾಗಿದೆ.  ಶ್ರೀಲಂಕಾದಲ್ಲಿ ಐಸಿಸ್ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಲು ರಾಜಪಕ್ಷೆ ಅಥವಾ ಗೋಟಾಬಯ ಅವರ ಸರ್ಕಾರ ಪುನರ್ ಪ್ರತಿಷ್ಠಾಪನೆಯಾಗಬೇಕೆಂದು ಭಾರತ ಸರ್ಕಾರ ಒತ್ತಾಯಿಸಬೇಕೆಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಲೇವಡಿ ಮಾಡಿರುವ ಸುಬ್ರಹ್ಮಣ್ಯ ಸ್ವಾಮಿ ಅವರು ಕಾಂಗಿಗಳು ಭಯೋತ್ಪಾದಕರ ಸ್ನೇಹಿತರು. ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಶ್ರೀಲಂಕಾದಲ್ಲಿ ನಡೆದ ದಾಳಿಯನ್ನು ಹಿಂದೂ ಭಯೋತ್ಪಾದನೆ ಎಂದು ಕರೆದರೂ ಕರೆಯಬಹುದು ಎಂದು ಸುಬ್ರಹ್ಮಣ್ಯ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದ ಶ್ರೀಲಂಕಾದ ಕೊಲಂಬೋದಲ್ಲಿಂದು ಸರಣಿ ಬಾಂಬ್ ಸ್ಫೋಟಿಸಿ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.  ಈ ದುಷ್ಕøತ್ಯದ ಹಿಂದೆ ವಿಶ್ವದ ಅತ್ಯಂತ ಕ್ರೂರ ಮತ್ತು ನಿರ್ದಯ ಭಯೋತ್ಪಾದನೆ ಸಂಘಟನೆ ಐಸಿಸ್ ಕೈವಾಡವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.  ಭಾರತೀಯರು ಮತ್ತು ಶ್ರೀಲಂಕಾದ ಕ್ರೈಸ್ತರನ್ನು ಗುರಿಯಾಗಿಟ್ಟುಕೊಂಡು ಉಗ್ರಗಾಮಿಗಳು ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin