ವಾಲ್ಮೀಕಿ ಸಮುದಾಯದ ಮೀಸಲಾತಿ ಹೋರಾಟಕ್ಕೆ ಮತ್ತಷ್ಟು ‘ಕಿಚ್ಚು’ ಹಚ್ಚಿದ ಸುದೀಪ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ. 25 : ವಾಲ್ಮೀಕಿ ಸಮುದಾಯದ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಮಂಗಳವಾರ ಬೃಹತ್ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಕೂಡ ಕೈಜೋಡಿಸಿದ್ದಾರೆ.

ಟ್ವಿಟರ್‌ನಲ್ಲಿ ವಿಡಿಯೋವನ್ನು ಅಪ್‌ ಲೋಡ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಿಚ್ಚ ಸುದೀಪ್, ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು 16 ದಿನಗಳಿಂದ ನೂರಾರು ಮೈಲಿ ಪಾದಯಾತ್ರೆ ಮಾಡಿ ಇವತ್ತು ಬೆಂಗಳೂರಿಗೆ ತಲುಪಿದ್ದಾರೆ. ಒಂದು ಒಳ್ಳೆಯ ಉದ್ದೇಶಕ್ಕಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೋಸ್ಕರ.

ಒಂದು ಒಳ್ಳೆಯ ಛಲ ಎಂದು ಹೇಳಿದರೆ ತಪ್ಪಾಗೋದಿಲ್ಲ. ಅದಕ್ಕಾಗಿ ಸಾವಿರಾರು ಜನರು ಒಟ್ಟಿಗೆ ಹೆಜ್ಜೆ ಇಟ್ಟು ಬಲ ಕೊಟ್ಟಿದ್ದೀರಿ. ಇದಕ್ಕೆ ಸರ್ಕಾರ ಆದಷ್ಟು ಬೇಗ ಸ್ಪಂದಿಸಿ ಒಂದು ಒಳ್ಳೆಯ ಪರಿಹಾರ ನೀಡುತ್ತದೆ ಎಂದು ನಂಬುತ್ತೇನೆ.

ಸ್ವಾಮೀಗಳೇ ಎಲ್ಲಾ ಸ್ನೇಹಿತರೇ ನಿಮಗೆ ನಮ್ಮ ಬೆಂಬಲವೂ ಇದೆ ಎಂದು ಹೇಳುತ್ತೇನೆ. ಆ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ನಾನು ನಿಮಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಆರಂಭವಾದ ಪಾದಯಾತ್ರೆ ಇಂದು ಬೆಂಗಳೂರಿಗೆ ತಲುಪಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಪ್ರತಿಭಟನೆಯಲ್ಲಿ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮುಂತಾದವರು ಭಾಗವಹಿಸುವ ಮೂಲಕ ಹೋರಾಟ ತಾರಕಕ್ಕೇರುವಂತೆ ಮಾಡಿದ್ದಾರೆ. ಇದೆ ಬೆನ್ನಲ್ಲೇ ಸುದೀಪ್ ಕೂಡ ಬೆಂಬಲ ಸೂಚಿಸಿರುವುದು ಹೋರಾಟಗಾರರಿಗೆ ಆನೆ ಬಲ ಬಂದಂತಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin