ಕಳಪೆ ಪಿಪಿಇ ಹಾಗೂ ಎನ್-95 ಮಾಸ್ಕ್ ವಿತರಣೆ ಬಗ್ಗೆ ತನಿಖೆಗೆ ಸರ್ಕಾರ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.4-ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ (ಕಿಮ್ಸ್) ಸಂಸ್ಥೆಯ ವೈದ್ಯರಿಗೆ ದೋಷಪೂರಿತ ಪಿಪಿಇ ಹಾಗೂ ಎನ್95 ಮಾಸ್ಕ್ ವಿತರಣೆ ಮಾಡಿರುವ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದು, ಕಿಮ್ಸ್‍ನಲ್ಲಿ ವೈದ್ಯರಿಗೆ ದೋಷಪೂರಿತ ಪಿಪಿಇ ಹಾಗೂ ಎನ್95 ಮಾಸ್ಕ್ ಕುರಿತು ದೂರಿನ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ವೈದ್ಯರಿಗೆ ದೋಷಪೂರಿತ ಪಿಪಿಇ ಮತ್ತು ಮಾಸ್ಕ್‍ಗಳನ್ನು ವಿತರಣೆ ಮಾಡಿರುವುದು ಸಾಬೀತಾದರೆ ಅದಕ್ಕೆ ಆಡಳಿತ ಮಂಡಳಿಯೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಕೋವಿಡ್ ವಿರುದ್ಧ ನಮ್ಮ ವೈದ್ಯರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಯೋಧರು. ಅವರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಸುಧಾಕರ್ ಹೇಳಿದ್ದಾರೆ.

Facebook Comments