ಶೀತ ಜ್ವರ, ಕೆಮ್ಮು, ನೆಗಡಿಗೆ ಪ್ರಾರಂಭದಲ್ಲೇ ಎಚ್ಚರ ವಹಿಸಿ : ಸಚಿವ ಸುಧಾಕರ್ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.6-ಮಳೆಗಾಲ ಆರಂಭವಾಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ಜನರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಲಹೆ ಮಾಡಿದ್ದಾರೆ.

ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದ ಕೂಡಲೇ ಹತ್ತಿರದ ಫೀವರ್ ಕ್ಲಿನಿಕ್‍ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.

ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭವಾಗಲಿದೆ. ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ನಾವೆಲ್ಲರೂ ಯೋಧರೇ ಎಂದಿರುವ ಅವರು, ಕ್ಷುಲ್ಲಕ ರಾಜಕಾರಣಕ್ಕಾಗಿ ಸುಳ್ಳು ಸುದ್ದಿ ಹರಡುವ, ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೊರೊನಾ ಯೋಧರಿಗೆ ಮಸಿ ಬಳಿಯುವ ದುಷ್ಕೃತ್ಯವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ.

Facebook Comments