ಈಶ್ವರಪ್ಪನವರು ಮಾತುಕತೆ ಮೂಲಕ ಬಿಕ್ಕಟ್ಟು ಬಗೆಹರಿಸಿಕೊಳ್ಳಲಿ : ಸಚಿವ ಸುಧಾಕರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.2- ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ನಡುವಿನ ಭಿನ್ನಾಭಿಪ್ರಾಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿರುದ್ಧ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಾಗುವುದು ಎಂದರು.

ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆಯಾಗಿದ್ದು, ಪಕ್ಷದ ಹಿರಿಯರು ಅದನ್ನು ಬಗೆಹರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಹೊಸ ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಈಗಾಗಲೇ 6 ರಿಂದ 9ನೆ ತರಗತಿಗಳ ಭೌತಿಕ ಹಾಜರಾತಿಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.

ಕಳೆದ ಎರಡು ದಿನಗಳಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಜತೆ ಚರ್ಚೆ ಮಾಡಿ ಹೊಸ ಮಾರ್ಗಸೂಚಿ ರೂಪಿಸಲು ನಿರ್ಧರಿಸಲಾಗಿತ್ತು ಎಂದರು.

Facebook Comments