‘ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ ಮತ್ತು ಬಂಡತನಗಳಿಗೆ ಮಿತಿಯೇ ಇಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.11- ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ ಮತ್ತು ಬಂಡತನಗಳಿಗೆ ಮಿತಿಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಟೀಕಿಸಿದ್ದಾರೆ. ಒಂದೆಡೆ ಮೇಲ್ಸೇತುವೆಗೆ ಸ್ವಾತಂತ್ರ್ಯ ವೀರ ಸಾವರ್ಕರ್ ಹೆಸರು ನಾಮಕರಣ ಮಾಡುವುದು ಬೇಡ ಎಂದು ವಿರೋಧಿಸುತ್ತಾರೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಯಾವ ಸೈದ್ಧಾಂತಿಕ ಕಾರಣಗಳಿಗಾಗಿ ಕಾಂಗ್ರೆಸ್ ನಾಯಕರೊಬ್ಬರ ತಂದೆಯ ಹೆಸರನ್ನು ಇಟ್ಟಿದ್ದಾರೆ. ಈಗ ಅದರ ಬಗ್ಗೆ ಏಕೆ ಚಕಾರವೆತ್ತುತ್ತಿಲ್ಲ ಎನ್ನುವುದ ನ್ನಾದರೂ ಸ್ಪಷ್ಟಪಡಿಸಲಿ ಎಂದು ಪತ್ರಿಕೆಯೊಂದರಲ್ಲಿ ವರದಿಯಾಗಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

Facebook Comments