ಆಸ್ಪತ್ರೆಯಿಂದಲೇ ಸುಧಾಕರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪತ್ನಿ-ಪುತ್ರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.27- ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ 47ನೇ ವರ್ಷದ ಜನ್ಮದಿನವಾಗಿದ್ದು, ಮಧ್ಯರಾತ್ರಿ ಪತ್ನಿ ಹಾಗೂ ಮಗಳು ಆಸ್ಪತ್ರೆಯಿಂದಲೇ ಶುಭಾಶಯ ಕೋರಿದ್ದಾರೆ.

ಟಿಕ್‍ಟಾಕ್ ವಿಡಿಯೋ ಮೂಲಕ ಸಚಿವರ ಪತ್ನಿ ಹಾಗೂ ಮಗಳು, ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ್ದಾರೆ. ಅಪ್ಪ ನೀನು ಎಲ್ಲಾ ಸಮಯದಲ್ಲೂ ಖುಷಿಯಾಗರಬೇಕು. ಲವ್ ಯೂ ಅಪ್ಪ. ನಿಮ್ಮ ಪ್ರೀತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಅಪ್ಪನ ಹುಟ್ಟುಹಬ್ಬಕ್ಕೆ ಮಗಳು ಶುಭ ಕೋರಿದ್ದಾಳೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಆಸ್ಪತ್ರೆಯಿಂದ ರಾತ್ರಿ 12 ಗಂಟೆಗೆ ನನ್ನ ಮಗಳು ಮತ್ತು ನನ್ನ ಪತ್ನಿ ನನ್ನ ಹುಟ್ಟುಹಬ್ಬಕ್ಕೆ ಶುಭಾಶಯತಿಳಿಸಿದ್ದಾರೆ. ಈ ವಿಡಿಯೋ ಉಡುಗೊರೆ ನನ್ನ ಜೀವನದಲ್ಲೇ ಮಧುರವಾದದ್ದು, ಪವಿತ್ರ ಪ್ರೀತಿಯ ಸಂಕೇತ. ಮಿಸ್ ಯು ಮೈ ಏಂಜಲ್ಸ್ ಅಂತ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಸಚಿವರು, ಆತ್ಮೀಯ ಬಂಧುಗಳೇ, ತಮ್ಮೆಲ್ಲರ ಶುಭಹಾರೈಕೆ, ಆಶೀರ್ವಾದಗಳಿಂದ ನನ್ನ ಕುಟುಂಬ ಸದಸ್ಯರು ಕ್ಷೇಮದಿಂದಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ನಾನು ಪ್ರಾಥಮಿಕ ಸಂಪರ್ಕಿತನಾಗಿ ಕ್ವಾರಂಟೈನ್‍ನಲ್ಲಿರುವುದರಿಂದ, ನನ್ನ ಜನ್ಮದಿನದಂದು ನೀವು ಇರುವಲ್ಲಿಂದಲೇ ಹಾರೈಸಿ, ಆಶೀರ್ವದಿಸಿ, ನಿಮ್ಮೆಲ್ಲರ ಪ್ರೀತಿ ಅಭಿಮಾನಗಳಿಗೆ ನಾನು ಚಿರಋಣಿಯಾಗಿದ್ದೇನೆ ಎಂದು ತಿಳಿಸಿದ್ದರು.

ಸಚಿವರ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರು ಹಾಗೂ ಇನ್ನಿಬ್ಬರು ಗಂಡು ಮಕ್ಕಳ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಹೀಗಾಗಿ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಸಚಿವರ ಕುಟುಂಬಕ್ಕೆ ಕೊರೊನಾ ಒಕ್ಕರಿಸಿದೆ ಎಂದು ತಿಳಿದ ತಕ್ಷಣ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

Facebook Comments