ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಆರೋಪ, ಮನನೊಂದು ಯುವಕ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ನೆಲಮಂಗಲ,ಜು.16- ಗೃಹಿಣಿಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ವಿನಾಕಾರಣ ಪ್ರಶ್ನಿಸಿದಕ್ಕೆ ಮನನೊಂದ ತೀರ್ಥಹಳ್ಳಿ ಮೂಲದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಆಕರ್ಷ್(22) ಆತ್ಮಹತ್ಯೆಗೆ ಶರಣಾದ ಯುವಕ.

ಉದ್ಯೋಗವನ್ನರಿಸಿ ಬಂದಿದ್ದ ಆಕರ್ಷ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ವಾಸವಾಗಿದ್ದುಕೊಂಡು ಗಾರ್ಮೆಂಟ್ಸ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದನು.

ಈ ಸಂದರ್ಭದಲ್ಲಿ ಗೃಹಿಣಿ ಜೊತೆ ಅನೈತಿಕ ಸಂಬಂಧವಿದೆ ಎಂದು ಕೆಲವರು ವಿನಾಕಾರಣ ಆರೋಪ ಮಾಡುತ್ತಿದ್ದರಿಂದ ಮನನೊಂದ ಈತ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ನೆಲಮಂಗಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments