ಮಾರಣಾಂತಿಕ ಕಾಯಿಲೆಯಿಂದ ಜಿಗುಪ್ಸೆಗೊಂಡು ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಕೊಳ್ಳೇಗಾಲ,ಜು.24- ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಜೀವನದಲ್ಲಿ ಜಿಗುಪ್ಸೆಗೊಂಡು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಾಲ್ಲೂಕಿನ ಶಿವನ ಸಮುದ್ರದ ಬಳಿ ಜರುಗಿದೆ. ಪಟ್ಟಣದ ಬಸ್ತಿಪುರ ಬಡಾವಣೆಯ ಲಕ್ಷ್ಮಮ್ಮ ಎಂಬ ಮೃತ ವೃದ್ಧೆ. ಈಕೆಗೆ ಕಳೆದ 4 ತಿಂಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಇರುವ ಬಗ್ಗೆ ವೈದ್ಯರು ಪತ್ತೆ ಹಚ್ಚಿದ್ದಾರೆ.

ನಂತರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪಟ್ಟಣದ ವಿದ್ಯಾನಗರದಲ್ಲಿರುವ ಮಗ ಮಹದೇವನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ನಿನ್ನೆ ಬೆಳಿಗ್ಗೆ ಇದ್ದಕ್ಕಿದ್ದ ಹಾಗೆ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿ ಶಿವನ ಸಮುದ್ರದ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಇತ್ತ ಮನೆಯವರು ಹುಡುಕಾಟ ನಡೆಸುತ್ತಿದ್ದಾಗ ನದಿಗೆ ಹಾರಿರುವ ವಿಷಯ ಗೊತ್ತಾಗಿದೆ. ಕೂಡಲೇ ಸಂಬಂಧಿಕರು ಅಲ್ಲಿಗೆ ತೆರಳಿ ನೋಡಿ ಕೊಳ್ಳೆಗಾಲ ಗ್ರಾಮಾಂತರ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪಿ.ಎಸ್.ಐ ವಿ.ಸಿ ಅಶೋಕ್ ಹಾಗೂ ಸಿಬಂದಿ ಶವವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ವೈದ್ಯರಿಂದ ಪಂಚನಾಮೆ ನಡೆಸಿ ವಾರಸುದಾರರಿಗೆ ನೀಡಿದರು. ಈ ಸಂಬಂಧ ಮಗ ಮಹದೇವು ನೀಡಿರುವ ದೂರಿನ ಮೇರೆಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ