ಪೊಲೀಸರಿಗೆ ಹೆದರಿ ಕೊಲೆ ಆರೋಪಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ,ಆ.22- ಮಹಿಳೆಯೊಬ್ಬಳನ್ನು ಕೊಂದು ಚಿನ್ನಾಭರಣ ದೋಚಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸ್ಟೇಶನ್ ಗಾಣಗಾಪುರ ಗ್ರಾಮದಲ್ಲಿ ನಡೆದಿದೆ. ಸ್ಟೇಶನ್ ಗಾಣಗಾಪುರ ನಿವಾಸಿ ಪೋಸಯ್ಯ ಕಲ್ಯಾಣಕರ್(28) ಆತ್ಮಹತ್ಯೆ ಮಾಡಿಕೊಂಡ ಆರೋಪಿ.

ನಿನ್ನೆ ಮಧ್ಯಾಹ್ನ ನೀಲೂರು ಗ್ರಾಮದಲ್ಲಿ ಲಕ್ಮಿಬಾಯಿ ಹೂಗಾರ್(40) ಅವರನ್ನು ಪೋಸಯ್ಯ ಕೊಲೆ ಮಾಡಿ, ಬಳಿಕ ಆಕೆಯ ಬಳಿಯಿದ್ದ ಚಿನ್ನಾಭರಣವನ್ನು ದೋಚಿದ್ದನು. ನಂತರ ತನ್ನ ಮನೆಗೆ ವಾಪಸ್ಸಾಗಿದ್ದನು. ಆದರೆ ಈ ವಿಚಾರ ಪೊಲೀಸರಿಗೆ ತಿಳಿದಿದೆ ಎನ್ನುವುದು ಗೊತ್ತಾಗಿ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಈ ಬಗ್ಗೆ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook Comments