ಪತ್ನಿಕೊಂದು ಪತಿ ಆತ್ಮಹತ್ಯೆ, 5 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಜ.12- ಪತ್ನಿಯನ್ನು ಕೊಂದು ಪತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಕೋಲಾರ ಹೊರವಲಯದ ಕಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಮೃತರು ಮೋಹನ್‍ಬಾಬು (30), ಪದ್ಮಾ (25) ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಸಂಬಂಧಿಕರೊಬ್ಬರು ಇವರ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮೋಹನ್‍ಬಾಬು ಕೋಲಾರ ನಗರದಲ್ಲಿರುವ ಇಟಿಸಿಎಂ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರೆ, ಪದ್ಮಾ ಅವರು ಕೆಎಂಎಫ್‍ನಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.  ಪದ್ಮಾ ಅವರಿಗೆ ವಿಷ ಕುಡಿಸಿ ಕೊಂದು ನಂತರ ಮೋಹನ್‍ಬಾಬು ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ದಂಪತಿ ಮಧ್ಯೆ ಸಣ್ಣ ಕಲಹ ಏರ್ಪಟ್ಟಿದ್ದು, ಅವರ ಪೋಷಕರು ಬುದ್ಧಿ ಹೇಳಿ ಸರಿಪಡಿಸಿದ್ದರು ಎಂದು ತಿಳಿದುಬಂದಿದ್ದು, ಕಳೆದ ರಾತ್ರಿ ಈ ದುರ್ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ದಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಡೀ ಗ್ರಾಮ ಈಗ ಶೋಕಸಾಗರದಲ್ಲಿ ಮುಳುಗಿದ್ದು, ಆತ್ಮಹತ್ಯೆಗೆ ಕಾರಣವೇನೆಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Facebook Comments