ಕರೋನಾ ಸೊಂಕಿತ ವೃದ್ದ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾವೇರಿ.ಮೇ.14 ಕರೋನಾ ಸೊಂಕಿನಿಂದ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ರಾಣಿಬೆನ್ನೂ ತಾಲೂಕಿನ ಗಂಗಾಜಲ ತಾಂಡದ ನಿವಾಸಿ.ಯಲ್ಲಪ್ಪ.(70) ಆತ್ಮಹತ್ಯೆ ಮಾಡಿಕೊಂಡ ವೃದ್ದ.

ಇವರಿಗೆ ಸೊಂಕು ತಗುಲಿದ್ದು ಚಿಕಿತ್ಸೆಗಾಗಿ ರಾಣಿಬೆನ್ನೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಗುಣಮುಖವಾಗದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹಾವೆರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಇದರಿಂದ ಮನನೊಂದು ಕೊಠಡಿಯಲ್ಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಆಸ್ಪತ್ರೆ ಸಿಬ್ಬಂದಿ ರೂಂ ಬಳಿ ಹೊಗಿ ನೊಡಿದಾಗ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಬಕೈಗೊಂಡಿದ್ದಾರೆ.

Facebook Comments