ಸಾಲಕ್ಕೆ ಹೆದರಿ ಕಾರ್ಪೆಂಟರ್ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 16-ಪಡೆದ ಸಾಲವನ್ನು ತೀರಿಸಲು ಆಗದೆ ಮನನೊಂದು ಕಾರ್ಪೆಂಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಮಾರತಹಳ್ಳಿಯ ಮಂಜುನಾಥನಗರದ 2ನೇ ಕ್ರಾಸ್ ನಿವಾಸಿ ಬಾಬು(38) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಬಾಬು ಅವರು ವೈಯಕ್ತಿಕ ಕಾರಣಕ್ಕಾಗಿ ಸಾಲ ಮಾಡಿಕೊಂಡಿದ್ದರು. ಪಡೆದ ಸಾಲವನ್ನು ಹಿಂದಿರುಗಿಸಲು ಸಾಧ್ಯವಾಗದೆ ನೊಂದಿದ್ದ ಇವರು ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ವಿಷಯ ತಿಳಿದ ಎಚ್‍ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ