ಡೆತ್‍ನೋಟ್ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜೂ.25- ನವವಿವಾಹಿತೆಯೊಬ್ಬರು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಜ್ಯೋತಿ(22) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ.

ಈಕೆ ಶೋರೂಮ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಭೃಂಗೇಶ್‍ಎಂಬಾತನೊಂದಿಗೆ ಕಳೆದ 6 ತಿಂಗಳ ಹಿಂದೆ ಮನೆಯವರಿಗೆ ತಿಳಿಯದಂತೆ ವಿವಾಹವಾಗಿದ್ದಳು. ಕಳೆದ ಒಂದು ತಿಂಗಳ ಹಿಂದೆ ವಿವಾಹ ನೋಂದಣಿಯನ್ನು ಮಾಡಿಸಿದ್ದು, ದಂಪತಿ ಅನೋನ್ಯವಾಗಿದ್ದರು ಎನ್ನಲಾಗಿದೆ. ಈ ನಡುವೆ ಪವನ್ ಎಂಬಾತ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ದಿವ್ಯಜ್ಯೋತಿ ಡೆತ್‍ನೋಟ್ ಬರೆದಿಟ್ಟು, ಮನೆಯಲ್ಲಿ ವೇಲ್‍ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಪವನ್ ಹಾಗೂ ಭೃಂಗೇಶ್‍ನನ್ನು ಮಡಕೇರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ