ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Hang-Suicide--01ಕನಕಪುರ, ಡಿ.27- ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕನಕಪುರ ಟೌನ್‍ನ ದೊಡ್ಡಿ ಬೀದಿಯ ನಿವಾಸಿ ನರಸಿಂಹ ನಾಯಕ್ (40) ಆತ್ಮಹತ್ಯೆಗೆ ಶರಣಾದವರು.
ಕಳೆದ ನಾಲ್ಕೈದು ತಿಂಗಳಿನಿಂದ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದರೂ ನೋವಿನಿಂದ ನರಳುತ್ತಿದ್ದರು. ಇಂದು ಮುಂಜಾನೆ 4 ಗಂಟೆಯ ಸಮಯದಲ್ಲಿ ಮನೆಯಿಂದ ಹೊರಟಿದ್ದ ಈತ ಹನುಮಂತರಾಯ ದೇವಾಲಯದ ಬಳಿಯ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಹುಣಸೆ ತೋಪಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣದ ವಾಣಿ ಟಾಕೀಸ್ ಬಳಿ ಮಟನ್ ಸ್ಟಾಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ನರಸಿಂಹ ನಾಯಕ್ ನಾಲ್ಕೈದು ತಿಂಗಳ ಹಿಂದೆ ಎದೆನೋವು ಕಾಣಿಸಿಕೊಂಡಿತ್ತು. ಗ್ರಾಮಾಂತರ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿರಿಸಿದ್ದಾರೆ. ಈ ಸಂಬಂಧ ಅವರ ಪುತ್ರ ಹರೀಶ್ ಪೆÇಲೀಸರಿಗೆ ದೂರು ನೀಡಿದ್ದು , ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments