ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.3- ಅಪಾರ್ಟ್‍ಮೆಂಟ್‍ನ 21ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಭಾರತಿ ಸಿಟಿ ಸಮೀಪದ ನೈಕೊ ಹೋಮ್ಸ್ ಟವರ್ ಎಂಬ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಚಾಂದಿನಿ ಸಿಂಗ್(26) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.

ಸಾಫ್ಟ್‍ವೇರ್ ಇಂಜಿನಿಯರ್ ಆಗಿರುವ ರಿತೇಶ್ ಸಿಂಗ್ ಅವರನ್ನು ನಾಗಪುರ ಮೂಲದ ಚಾಂದಿನಿ ಸಿಂಗ್ ವಿವಾಹವಾಗಿದ್ದರು. ದಂಪತಿ ಈ ಅಪಾರ್ಟ್‍ಮೆಂಟ್‍ನ 21ನೇ ಮಹಡಿಯಲ್ಲಿ ವಾಸವಾಗಿದ್ದರು.

ಈ ನಡುವೆ ಚಾಂದಿನಿ ರಾತ್ರಿ 21ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ಕೊತ್ತನೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments