ಮನೆ ಮಾಲೀಕನೊಂದಿಗೆ ಜಗಳ : ಮಹಿಳೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ದೇವನಹಳ್ಳಿ,ಜೂ.18-ಮನೆ ಮಾಲೀಕರು ಕಿರುಕುಳ ನೀಡಿ ನಮ್ಮ ಮೇಲೆ ಹಲ್ಲೆ ಮಾಡಿದರೆಂದು ಆರೋಪಿಸಿದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ಪಟ್ಟಣದ ನಿವಾಸಿ ಮಂಜುಳಾ (35) ಆತ್ಮಹತ್ಯೆಗೆ ಶರಣಾದ ಮಹಿಳೆ.

ಬಾಡಿಗೆಮನೆ ವಿಚಾರವಾಗಿ ಮಂಜುಳಾ ಸುಬ್ರಮಣಿ ಅವರೊಂದಿಗೆ ಮಾಲೀಕರು ಜಗಳವಾಡಿದ್ದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು ಎನ್ನಲಾಗಿದೆ.
ಈ ನಡುವೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ತಮಗೆ ನ್ಯಾಯ ಸಿಗಲಿಲ್ಲ ಮಾಲೀಕರ ಕುಟುಂಬ ನಮ್ಮ ಮೇಲೆ ಹಲ್ಲೆ ನಡೆಸಿದ್ದು,

ಪತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸೆಲ್ಫಿ ವಿಡಿಯೋ ಮಾಡಿ ಮಂಜುಳ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವಿಡಿಯೋವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಠಾಣೆಗೆ ಮುತ್ತೆಗೆ:  ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಮಂಜುಳ ಕುಟುಂಬಸ್ಥರು, ಫೋಷಕರು, ಸಂಬಂಧಿಕರು ತಡರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ರೋದಿಸುತ್ತಿದ್ದರು.  ಪೊಲೀಸರು ಇವರನ್ನು ಸಮಾಧಾನಪಡಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ