ಅಂಬರೀಶ್ ಅವರ ಕಚೇರಿಯನ್ನೇ ಆಫೀಸ್ ಮಾಡಿಕೊಂಡ ಸಂಸದೆ ಸುಮಲತಾ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಸೆ.11-ಕ್ಷೇತ್ರದ ಎಲ್ಲಾ ತಾಲ್ಲೂಕುಗಳಿಗೂ ಪ್ರವಾಸ ಕೈಗೊಂಡು ಅಲ್ಲಿನ ಜನರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯಲ್ಲಿರುವ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ತಾಲೂಕಿನ ಜನರು ಮಂಡ್ಯಕ್ಕೆ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾನೇ ಖುದ್ದಾಗಿ ಎಲ್ಲಾ ತಾಲೂಕುಗಳಿಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತೇನೆ ಎಂದು ತಿಳಿಸಿದರು.

ಈ ಕಚೇರಿಯು ಅಂಬರೀಶ್ ಅವರ ಕಚೇರಿ ಆಗಿತ್ತು. ಈಗ ಅದೇ ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ ಎಂದರು. ನನಗೆ ಸಿಕ್ಕಿರುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಕೆಲಸವನ್ನು ಮಾಡುತ್ತೇನೆ.

ಈಗ ಹೊಸ ಸರ್ಕಾರ ಬಂದಿರುವುದರಿಂದ ಎಲ್ಲೆಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿದೆಯೋ ಅವುಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುತ್ತೇನೆ ಎಂದು ಹೇಳಿದರು. ಉದ್ಘಾಟನೆ ನಂತರ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ