ಈ ವರ್ಷದ ಬೇಸಿಗೆ ಕುರಿತು ಆಘಾತಕಾರಿ ಸಂಗತಿ ಬಿಚ್ಚಿಟ್ಟ ಹವಾಮಾನ ಇಲಾಖೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.4- ಈ ವರ್ಷದ ಬೇಸಿಗೆಯ ಬಿಸಿಲು ಜನರನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ. ಎಚ್ಚರ ತಪ್ಪಿದರೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಬಹುದು ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ಆಂಧ್ರ, ತಮಿಳುನಾಡು, ಕರಾವಳಿ ಭಾಗದಲ್ಲಿ ಬಿಹಾರ, ಉತ್ತರಪ್ರದೇಶ, ರಾಜಸ್ತಾನ , ಮಹಾರಾಷ್ಟ್ರ ರಾಜ್ಯಗಳು ಕಟ್ಟೆಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕಳೆದ ವರ್ಷ ವ್ಯಾಪಕ ವರ್ಷಧಾರೆಯಿಂದ ದಕ್ಷಿಣ ಹಾಗೂ ಉತ್ತರ ಭಾಗದಲ್ಲಿ ಅತಿವೃಷ್ಟಿ ಉಂಟಾಗಿ ಸಾಕಷ್ಟು ಹಾನಿಯಾಗಿತ್ತು. ಆದರೆ ಈ ಬಾರಿ ರಣ ಬಿಸಿಲು ದಾಖಲೆ ಮುಟ್ಟಲಿದೆ ಎಂದು ತಿಳಿದು ಬಂದಿದೆ.

ಸಾಮಾನ್ಯವಾಗಿ ಬೇಸಿಗೆ ಸಂದರ್ಭದಲ್ಲಿ ಬೆಳಗ್ಗೆ ಬಿಸಿಲು ಹೆಚ್ಚಾಗಿ ಸಂಜೆಯ ವೇಳೆಗೆ ಉಷ್ಣಾಂಶದಲ್ಲಿ ಇಳಿಕೆಯಾಗುತ್ತಿತ್ತು. ಆದರೆ ಈ ಬೇಸಿಗೆಯಲ್ಲಿ ವಿಪರೀತ ಸೆಖೆ ಹಾಗೂ ಸೂರ್ಯನ ಪ್ರತಾಪ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬೆಳಗ್ಗೆ, ಸಂಜೆ ಇಡೀ ದಿನ ಬಿಸಿಯಾದ ಹಬೆ ಇರಲಿದೆ. ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶಗಳಲ್ಲಿ ಅತ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಆಗಾಗ ದೇಹದ ಉಷ್ಣಾಂಶವನ್ನು ಸ್ಥಿಮಿತದಲ್ಲಿಟ್ಟುಕೊಳ್ಳಲು ನೀರು ಹೆಚ್ಚಾಗಿ ಕುಡಿಯುತ್ತಿರಬೇಕು. ಬಿಸಿಲಿನಲ್ಲಿ ಓಡಾಡುವುದನ್ನು ಕಡಿಮೆ ಮಾಡಬೇಕು ಎಂದು ತಿಳಿಸಲಾಗಿದೆ.

ಬಿಸಿಲಿನಲ್ಲಿ ಓಡಾಡುವಾಗ ಎಚ್ಚರಿಕೆ ಅಗತ್ಯ. ಕರ್ನಾಟಕದ ಗುಲ್ಬರ್ಗ, ರಾಯಚೂರು, ಬೀದರ್ ಭಾಗಗಳಲ್ಲಿ ಈ ಬಾರಿ ಉಷ್ಣಾಂಶ 42 ಡಿಗ್ರಿ ಸೆಲ್ಷಿಯಸ್ ಮುಟ್ಟಬಹುದು ಎಂದು ತಿಳಿದು ಬಂದಿದೆ.

ಆಚೆ ಇದ್ದಾಗ ಸುಸ್ತಾದರೆ ತಕ್ಷಣ ಎಚ್ಚೆತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾಂಕ್ರಾಮಿಕ ರೋಗಗಳು ಹಾಗೂ ಸೂರ್ಯನ ಶಾಖದಿಂದ ದೇಹದ ಮೇಲೆ ಉಂಟಾಗುವಂತಹ ದುಷ್ಪರಿಣಾಮಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಸೂಚಿಸಲಾಗಿದೆ.

ಇನ್ನೊಂದೆಡೆ ವಾತಾವರಣದಲ್ಲಿನ ಓಜಾನ್ ಪದರದಲ್ಲಿ ಕೂಡ ರಂಧ್ರ ಕೂಡ ಕಾಣಿಸಿಕೊಂಡಿದ್ದು , ಇದು ಅಪಾಯದ ಮುನ್ಸೂಚನೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

Facebook Comments

Sri Raghav

Admin