ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ಸುನೀಲ್‍ಕುಮಾರ್ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.10- ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ಸುನೀಲ್‍ಕುಮಾರ್ ಹಾಗೂ ವಿಧಾನ ಪರಿಷತ್ ಸಚೇತಕರಾಗಿ ಮಹಂತೇಶ್ ಕವಟಗಿ ಮಠ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾರ್ಕಳದ ಶಾಸಕರಾಗಿರುವ ಸುನೀಲ್‍ಕುಮಾರ್ ಅವರನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ನೇಮಕ ಮಾಡಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ.

ಇದೇ ರೀತಿ ಬಿಜೆಪಿ ಹಿರಿಯ ಮುಖಂಡ ಮಹಂತೇಶ್ ಕವಟಗಿ ಮಠ ಅವರನ್ನು ಪರಿಷತ್‍ನ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸುನೀಲ್‍ಕುಮಾರ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಆದರೆ ಉಡುಪಿ ಜಿಲ್ಲೆಯಿಂದ ಮೇಲ್ಮನೆ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದರಿಂದ ಸುನೀಲ್‍ಕುಮಾರ್ ಸಚಿವ ಸ್ಥಾನ ಕೈತಪ್ಪಿತ್ತು.  ಹೀಗಾಗಿ ಮುಖ್ಯಮಂತ್ರಿಗಳು ಅವರಿಗೆ ವಿಧಾನಸಭೆಯ ಮುಖ್ಯ ಸಚೇತಕ ಸ್ಥಾನವನ್ನು ಕಲ್ಪಿಸಿದ್ದಾರೆ.

Facebook Comments