ಸೂರತ್ ನಲ್ಲಿ ಘೋರ ದುರಂತ , ಕೋಚಿಂಗ್ ಸೆಂಟರ್ ಗೆ ಬೆಂಕಿಬಿದ್ದು 20 ವಿದ್ಯಾರ್ಥಿಗಳು ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಸೂರತ್‌, ಮೇ 24- ಗುಜರಾತ್ ನ ಸೂರತ್ ನಲ್ಲಿರುವ ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ
ಪರಿಣಾಮ 20 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪಾರಾದ
ಘಟನೆ ನಡೆದಿದೆ.

ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಕಿ
ವ್ಯಾಪಿಸಿದ ಕಟ್ಟಡದಿಂದ ಕೆಳಗೆ ಹಾರಿ ಹಲವರು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಹಲವು ಭಾಗಗಳಿಗೆ ವ್ಯಾಪಿಸಿ ಹೊತ್ತಿ ಉರಿದಿದೆ.

ದಟ್ಟವಾದ ಹೊಗೆ ಆವರಿಸಿದೆ. 19 ಅಗ್ನಿಶಾಮಕ ವಾಹನಗಳು ಹಾಗೂ 2 ಹೈಡ್ರಾಲಿಕ್‌ ಪ್ಲಾಟ್‌ ಫಾರಂಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಕಟ್ಟಡದಲ್ಲಿದ್ದ 50 ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಕಟ್ಟಡದಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. ಅಲ್ಲದೆ ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹಲವರು ಕಟ್ಟಡದ ಮೇಲ್ಛಾವಣಿಯಿಂದ ಹಾರಿದ್ದು, ಈ ದೃಶ್ಯಗಳು ಭೀತಿ ಹುಟ್ಟಿಸುವಂತಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin