“ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ.2- ಸದ್ಯದಲ್ಲಿಯೆ ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗುವುದಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಸಚಿವ ಸುರೇಶ್‍ಕುಮಾರ್ ಸಲಹೆ ನೀಡಿದರು.

ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿ ಮಾತನಾಡಿದ ಅವರು, ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ದವಾಗಿದೆ ಎಂದು ಹೇಳಿದರು.

ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ ನೀಡಲು ಸೂಚಿಸಿದರಲ್ಲದೇ, ತಕ್ಷಣದಿಂದಲೇ ಕಾಮಗಾರಿಗಳು ಆರಂಭಿಸುವಂತೆ ಎಲ್ಲ ಪೂರ್ವಭಾವಿ ಕ್ರಮಗಳಿಗೆ ಆಗ್ರಹಿಸಿದರು.

ಈ ವೇಳೇ ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿದ ಸಚಿವರು, ಬೆಂಗಳೂರು ನಗರದ ಹಲವಾರು ಸ್ಥಳಗಳಲ್ಲಿ ಹೀಗೆ ಹಲವು ದಿನಗಳಿಂದ ನೆಲೆಸಿರುವ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳ ಸಾವಿರಾರು ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆತಂಕದಿಂದ ಸಿದ್ಧರಾಗುತ್ತಿದ್ದು, ಇವರುಗಳು ಇಲ್ಲಿಯೇ ನೆಲೆಸುವಂತೆ ಸರ್ಕಾರದ ಪರವಾಗಿ ತಾವು ಖುದ್ದಾಗಿ ತೆರಳಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಸಚಿವರೊಂದಿಗೆ ಹಿರಿಯ ಐ ಎ ಎಸ್ ಅಧಿಕಾರಿ ಕುಮಾರ್ ನಾಯಕ್, ಸೇರಿದಂತೆ ಸ್ಥಳೀಯ ಪೆÇಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin