BIG NEWS: ಶೀಘ್ರದಲ್ಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.23- ಚಳಿಗಾಲದ ಸಂದರ್ಭ ದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗ ಬಹುದೆಂಬ ತಜ್ಞರ ಸಮಿತಿ ಸಲಹೆ ನೀಡಿದ ಹಿನ್ನೆಲೆ, ಡಿಸೆಂಬರ್ ತಿಂಗಳ ಅಂತ್ಯದವರೆಗೆ ಶಾಲಾಕಾಲೇಜುಗಳನ್ನು ಪ್ರಾರಂಭಿಸದಿರಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಾರಿಗೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬಿಬಿಎಂಪಿ ಸೇರಿದಂತೆ ಮತ್ತಿತರ ಅಕಾರಿಗಳ ಜತೆ ಇಂದು ನಡೆದ ಸಭೆಯಲ್ಲಿ, ಡಿಸೆಂಬರ್ ತಿಂಗಳ ಕೊನೆಯವರೆಗೂ ಯಾವುದೇ ಶಾಲಾಕಾಲೇಜುಗಳನ್ನು ತೆರೆಯದಿರಲು ಸಭೆಯಲ್ಲಿ ಒಮ್ಮತ ನಿರ್ಧಾರ ಕೈಗೊಳ್ಳಲಾಯಿತು.

ಚಳಿಗಾಲದ ಸಂದರ್ಭದಲ್ಲಿ ಕೊರೊನಾ ಸೋಂಕು ಹೆಚ್ಚಾಗಬಹುದೆಂದು ಹಿರಿಯ ತಜ್ಞರನ್ನೊಳಗೊಂಡ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಸುದ್ದಿಗಾರರಿಗೆ ತಿಳಿಸಿದರು.

ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು, ಡಾ.ಸುದರ್ಶನ್ ನೇತೃತ್ವದ 16 ಮಂದಿ ತಜ್ಞರನ್ನೊಳಗೊಂಡ ತಾಂತ್ರಿಕ ಸಲಹಾ ಸಮಿತಿ ಡಿಸೆಂಬರ್ ಅಂತ್ಯದವರೆಗೆ ಶಾಲಾಕಾಲೇಜುಗಳನ್ನು ಪ್ರಾರಂಭಿಸಬಾರದೆಂದು ಸಲಹೆ ಮಾಡಿದೆ.ಇದನ್ನು ಸರ್ಕಾರ ಸಕಾರತ್ಮಕವಾಗಿ ಪರಿಗಣಿಸಿದ್ದು, ಅವರ ಸಲಹೆಯನ್ನು ಅನುಷ್ಠಾನ ಮಾಡುವುದಾಗಿ ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿವಿಧ ಇಲಾಖೆಯ ಅಕಾರಿಗಳು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ ಮತ್ತು ಯೋಗಕ್ಷೇಮ ಮುಖ್ಯವಾಗಿರುವುದರಿಂದ ಸರ್ಕಾರ ಒಮ್ಮತದ ತೀರ್ಮಾನಕ್ಕೆ ಬಂದಿದೆ. ಡಿಸೆಂಬರ್ ಕೊನೆ ವಾರದಲ್ಲಿ ಮತ್ತೊಂದು ಸುತ್ತಿನ ಕರೆದು ಅಂದಿನ ಪರಿಸ್ಥಿತಿ ಮತ್ತು ಸಮಯಕ್ಕೆ ಅನುಗುಣವಾಗಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.

ಶಾಲಾಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕುರಿತಂತೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಕೆಲವು ಪೋಷಕರು ಪ್ರಾರಂಭ ಮಾಡುವಂತೆ, ಇನ್ನು ಕೆಲವು ಪೋಷಕರು ಬೇಡವೇ ಬೇಡ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಅಂತಿಮವಾಗಿ ಪೋಷಕರು, ಎಸ್‍ಡಿಸಿಎಂಸಿ, ಬಿಇಒ, ಡಿಡಿಸಿಐ ಖಾಸಗಿ ಶಾಲಾ ಮಂಡಳಿಗಳು ಸೇರಿದಂತೆ ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು ಎಂದರು ತಿಳಿಸಿದರು.

ಶಾಲಾಕಾಲೇಜುಗಳನ್ನು ಈ ಸಂದರ್ಭದಲ್ಲಿ ಆರಂಭಿಸುವುದು ಉಚಿತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ವೆಬಿನಾರ್ ಮೂಲಕ ಮಾಹಿತಿ ನೀಡಿದರು. ಚಳಿಗಾಲದಲ್ಲಿ ಕೊರೊನಾ 2ನೇ ಅಲೆ ಸೃಷ್ಟಿಸುವ ಸಾಧ್ಯತೆ ಇರುವ ಹಿನ್ನೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲಾಕಾಲೇಜುಗಳನ್ನು ಆರಂಭಿಸಿದಂತೆ ಸಲಹೆ ಮಾಡಿದ್ದರು. ಇದನ್ನು ಸಹ ಸರ್ಕಾರ ಪರಿಗಣಿಸಿದೆ ಎಂದು ತಿಳಿಸಿದರು.

ನಾವು ಖಾಸಗಿ ಇಲ್ಲವೇ ಇನ್ಯಾವುದೋ ಲಾಬಿಗೆ ಮಣಿದು ಶಾಲೆಗಳನ್ನು ಆರಂಭಿಸಬೇಕೆಂಬ ತೀರ್ಮಾನಕ್ಕೆ ಬಂದಿರಲ್ಲಿಲ್ಲ. ಪೋಷಕರು ಹಾಗೂ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಸಿಗುತ್ತಿಲ್ಲ ಎಂಬ ಕಾರಣಕ್ಕಾಗಿ ಅವರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿತ್ತು ಎಂದು ಸ್ಪಷ್ಟಪಡಿಸಿದರು.

Facebook Comments