ಶಾಲೆಗಳಲ್ಲಿ ಬ್ಯಾಗ್ ರಹಿತ ದಿನಾಚರಣೆಗೆ  ಸರ್ಕಾರದ ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.14- ಶಾಲೆಗಳಲ್ಲಿ ಬ್ಯಾಗ್ ರಹಿತ ದಿನಾಚರಣೆಗೆ ಒಂದು ದಿನವನ್ನು ಮೀಸಲಿಡಲಾಗು ವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ.  ರಾಜಾಜಿನಗರದ ಕೆಎಲ್‍ಇ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಚಲನಚಿತ್ರ ತೋರಿಸುವುದು ಉತ್ತಮ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ಶಾಲೆಗಳಲ್ಲಿ ಜಾರಿಗೆ ತರುವ ಉದ್ದೇಶವಿದೆ ಎಂದರು.

ಪೋಷಕರು ಮಕ್ಕಳ ಚಲನವಲನ ಬಗ್ಗೆ ಹೆಚ್ಚು ಗಮನಹರಿಸುವ ಅಗತ್ಯವಿದೆ. ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡುವುದು ಅವಶ್ಯವಾಗಿದೆ. ಶಾಲೆಯಲ್ಲಿ ಮಾತ್ರವಲ್ಲದೆ ಮನೆಯಲ್ಲೂ ಕೂಡ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

Facebook Comments