ಎಸ್‍ಡಿಎಂಸಿ ಅಧ್ಯಕ್ಷರ ವಜಾಗೆ ಸಚಿವ ಸುರೇಶ್‍ಕುಮಾರ್ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.14- ಉಡುಪಿ ಜಿಲ್ಲೆ ಉಪ್ಪುಂದದ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸಿ ಕಠಿಣ ಕ್ರಮಕ್ಕೆ ಮುಂದಾಗುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ. ಸರ್ಕಾರಿ ಹಿರಿಯ ಉರ್ದು ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಮತಾ ಎಂಬುವವರ ಮೇಲೆ ಅದೇ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮೋಹನ್‍ಚಂದ್ರ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದರು.

ಇದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೋಹನ್‍ಚಂದ್ರ ಅವರನ್ನು ಎಸ್‍ಡಿಎಂಸಿ ಹುದ್ದೆಯಿಂದ ವಜಾಗೊಳಿಸಿ ಕಠಿಣ ಕ್ರಮ ಜರುಗಿಸುವಂತೆ ಸಚಿವ ಸುರೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಶಿಕ್ಷಕಿ ಮಮತಾ ಅವರಿಗೆ ಸಾಂತ್ವನ ಹೇಳಿದ ಸಚಿವ ಸುರೇಶ್‍ಕುಮಾರ್ ಶಿಕ್ಷಣ ಇಲಾಖೆ ಆಯುಕ್ತರು, ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮೋಹನ್‍ಚಂದ್ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Facebook Comments