ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.12-ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಯುಸಿ ಮಕ್ಕಳಿಗೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಇಂದಿಲ್ಲಿ ಹೆಳಿದರು. ಅದಮ್ಯ ಚೇತನದ ಮಧ್ಯಾಹ್ನದ ಬಿಸಿಯೂಟ ಪಡೆಯುವ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಹಾಲು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,

ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು. ಈ ಸಂಬಂಧ ಆರ್ಥಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಕರ್ನಾಟಕದ ನಿಜವಾದ ಸಾಧಕಿ ತೇಜಸ್ವಿನಿ ಅನಂತ್‍ಕುಮಾರ್.

ಅದಮ್ಯ ಚೇತನ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಎರಡೂ ಅಂತಃಕರಣ ಸಂಸ್ಥೆಗಳು ಜತೆಗೂಡಿವೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಲು ಹೊರಟಿರುವುದು ಶ್ಲಾಘನೀಯ ಎಂದರು. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದ ಬಗ್ಗೆ ಯೋಚನೆ ಬಂದಿದ್ದು ಕಾಮರಾಜ್ ನಾಡರ್ ಅವರಿಗೆ. ಅದಕ್ಕೆ ಒಂದು ಸ್ವರೂಪ ನೀಡಿದ್ದು ಅದಮ್ಯ ಚೇತನ. ನಮ್ಮ ಮಕ್ಕಳಿಗೆ ಪೌಷ್ಠಿಕಾಂಶ ಹೊಂದಿರುವ ಆಹಾರ ಕೊಡುವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಸಚಿವರು ಹೇಳಿದರು.

1,17,182 ಮಕ್ಕಳಿಗೆ ಊಟ ನೀಡಲಾಗುತ್ತಿದೆ. 2,25,000 ಮಕ್ಕಳಿಗೆ ಕೊಡುವ ಗುರಿಯನ್ನು ಹೊಂದಲಾಗಿದೆ. ಕಲಬುರಗಿಯಲ್ಲೂ ಅದಮ್ಯ ಚೇತನದ ಮಧ್ಯಾಹ್ನದ ಕಾರ್ಯಕ್ರಮ ಸದ್ಯದಲ್ಲೇ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲ ಮಕ್ಕಳಿಗೂ ಪೌಷ್ಟಿಕಾಂಶಯುಕ್ತ ಹಾಲು ಕೊಡುವ ಕಾರ್ಯಕ್ರಮ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ