ಸುಶಾಂತ್‍ಸಿಂಗ್ ಜೀವನ ಆಧರಿಸಿದ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.10-ಬಾಲಿವುಡ್ ನಟ ಸುಶಾಂತ್‍ಸಿಂಗ್ ರಜಫೂತ್ ಜೀವನ ಆಧರಿಸಿ ತಯಾರಿಸಲಾಗಿರುವ ಸಿನಿಮಾ ಬಿಡುಗಡೆಗೆ ತಡೆ ನೀಡಲು ದೇಹಲಿ ಹೈಕೋರ್ಟ್ ನಿರಾಕರಿಸಿದೆ.

ಕೆಲ ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾದ ಸುಶಾಂತ್ ಸಿಂಗ್ ಅವರ ಜೀವನ ಆಧರಿಸಿ ನ್ಯಾಯ್ ಎಂಬ ಚಿತ್ರ ತಯಾರಾಗಿದ್ದು ಬರುವ ಶುಕ್ರವಾರ ಬಿಡುಗಡೆಗೆ ಸಿದ್ದವಾಗಿದೆ.

ಈ ಮಧ್ಯೆ ಸುಶಾಂತ್ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ನ್ಯಾಯಾಲಯದ ಮೊರೆ ಹೋಗಿ ತಮ್ಮ ಪುತ್ರನ ಜೀವನ ಆಧರಿಸಿ ನಿರ್ಮಿಸಲಾಗಿರುವ ಚಲನಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಂಜೀವ್ ನರೂಲ್ಲಾ ಅವರು ಅರ್ಜಿಯನ್ನು ವಜಾಗೊಳಿಸಿ ಸಿನಿಮಾ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ್ದಾರೆ.

Facebook Comments

Sri Raghav

Admin