ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ‌ ಸುಶೀಲ್ ಚಂದ್ರ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ‌ ಸುಶೀಲ್ ಚಂದ್ರ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ಅಧಿಕಾರವಧಿ ಇಂದಿಗೆ ಮುಕ್ತಾಯವಾಗಿದೆ.ತೆರವಾಗಲಿರುವ ಈ ಸ್ಥಾನಕ್ಕೆ ಸುಶೀಲ್ ಚಂದ್ರ ಅವರನ್ನು ನೇಮಿಸಲಾಗಿದ್ದು, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

ಲೋಕಸಭಾ ಚುನಾವಣೆಗೆ ಮುನ್ನ ಚಂದ್ರ ಅವರನ್ನು ಫೆಬ್ರವರಿ 14, 2019 ರಂದು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಅವರ ಅಧಿಕಾರವಧಿ‌ ಮೇ 14, 2022 ರ ವರೆಗೆ ಇರಲಿದೆ. ಅವರ ಅಧಿಕಾರದ ವೇಳೆ ‌ಗೋವಾ, ಮಣಿಪುರ, ಉತ್ತರಾಖಂಡ್, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆ ಅವಧಿ ಮುಂದಿನ ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತದೆ. ಉತ್ತರ ಪ್ರದೇಶ ವಿಧಾನಸಭೆಯ ಅವಧಿ ಮುಂದಿನ ವರ್ಷ ಮೇ 14 ಕ್ಕೆ ಕೊನೆಗೊಳ್ಳುತ್ತದೆ.

ಐದು ವರ್ಷಗಳ ಅವಧಿ ಮುಗಿಯುವ ಮೊದಲು ಹೊಸ  ಚುನಾವಣೆಯನ್ನು ‌ನಡೆಸಬೇಕಾಗಿದೆ. ಚುನಾವಣಾ ಆಯೋಗಕ್ಕೆ ಬರುವ ಮೊದಲು ಚಂದ್ರ ಕೇಂದ್ರ ನೇರ ತೆರಿಗೆ ಮಂಡಳಿಯ ಅಧ್ಯಕ್ಷರಾಗಿದ್ದರು.

Facebook Comments

Sri Raghav

Admin