ಬಾಹುಬಲಿಗೆ ಸುತ್ತೂರು ಶ್ರೀಗಳಿಂದ ವಿಶೇಷ ಅಭಿಷೇಕ

ಈ ಸುದ್ದಿಯನ್ನು ಶೇರ್ ಮಾಡಿ

Sutturu--01
ಶ್ರವಣಬೆಳಗೊಳ, ಮೇ 28- ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ವಿಶೇಷ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಪೀಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ ಭಗವಾನ್ ಬಾಹುಬಲಿ ಸ್ವಾಮಿಗೆ ಅಭಿಷೇಕ ನೇರವೇರಿಸಿದರು. ವಿಂಧ್ಯಗಿರಿ ಬೆಟ್ಟದ ತಪ್ಪಲಿನಲ್ಲಿರುವ ಸ್ವಾಗತ ಕಚೇರಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಆಗಮಿಸಿದ ಸ್ವಾಮೀಜಿಯವರಿಗೆ ಪಾದಪೂಜೆ ಮಾಡುವ ಮೂಲಕ ಸ್ವಾಗತಿಸಿ, ನೆನಪಿನ ಕಾಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು.

ನಂತರ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರೊಂದಿಗೆ ಡೋಲಿಯ ಮೂಲಕ ಬೆಟ್ಟವನ್ನೇರಿ ಅಭಿಷೇಕ ಮಾಡಿದರು. ನಂತರ ಆಶೀರ್ವಚನ ನೀಡಿದ ಅವರು, ಭಗವಾನ್ ಬಾಹುಬಲಿ ಸ್ವಾಮಿಯ ತ್ಯಾಗ, ಶಾಂತಿ ಮತ್ತು ಅಹಿಂಸಾ ತತ್ವಗಳು ಇಡೀ ಪ್ರಪಂಚಕ್ಕೆ ಮಾದರಿಯಾಗಿವೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು ಬಹಳ ಸಂತೋಷವಾಗಿದೆ. ನಮಗೆ ತಿಳಿದಂತೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಇತಿಹಾಸದಲ್ಲಿಯೇ ಪ್ರಥಮವಾಗಿ 4ನೆ ಬಾರಿಗೆ ಮಹಾಮಸ್ತಕಾಭಿಷೇಕ ಮಹೋತ್ಸವದ ಜವಾಬ್ದಾರಿ ಹೊತ್ತು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ ಎಂದರು.

ಮಹಾಮಸ್ತಕಾಭಿಷೇಕ ಮಹೋತ್ಸವವು ಫೆಬ್ರವರಿಯಿಂದ ಆರಂಭವಾಗಿ ಪ್ರತಿ ಭಾನುವಾರ ಬಹಳ ವಿಜೃಂಭಣೆಯಿಂದ ಸಾಗುತ್ತಿದ್ದು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ವತಿಯಿಂದ ಮಹಾಮಸ್ತಕಾಭಿಷೇಕ ಮಹೋತ್ಸವದ ಸೇವೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

Facebook Comments

Sri Raghav

Admin