ಮೋದಿ ಭೇಟಿಯಾದ ಸುವೇಂದು ಅಧಿಕಾರಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.10-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವ ಪಶ್ಚಿಮ ಬಂಗಾಳ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಅವರು ಬಂಗಾಳದ ರಾಜಕೀಯ ಚಟುವಟಿಕೆ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತಿತರ ಮುಖಂಡರನ್ನು ಭೇಟಿಯಾಗಿದ್ದ ಅಧಿಕಾರಿ ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಂಗಾಳದ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಅಧಿಕಾರಿ ಇದೇ ಮೊದಲ ಭಾರಿಗೆ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ.

ಮೋದಿ ಅವರೊಂದಿಗೆ 45 ನಿಮಿಷ ಮಾತುಕತೆ ನಡೆಸಿದ್ದೇನೆ.ಅವರ ಅಮೂಲ್ಯ ಸಮಯವನ್ನು ನನಗೆ ಮೀಸಲಿಟ್ಟಿದ್ದಕ್ಕೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಅವರೊಂದಿಗೆ ಮಾತನಾಡಲು ಅವಕಾಶ ಲಭಿಸಿದ್ದು ನನ್ನ ಭಾಗ್ಯ ಎಂದು ಅಧಿಕಾರಿ ಟ್ವಿಟ್ ಮಾಡಿದ್ದಾರೆ.

ಮಾತುಕತೆ ಸಂದರ್ಭದಲ್ಲಿ ಬಂಗಾಳದ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯದ ಅಭಿವೃದ್ದಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಸುವೇಂದು ಹೇಳಿಕೊಂಡಿದ್ದಾರೆ. ಈ ಮಧ್ಯೆ ಸುವೇಂದು ಅಧಿಕಾರಿಯೊಂದಿಗೆ ಮಾತುಕತೆ ನಡೆಸಿರುವುದನ್ನು ಮೋದಿ ಟ್ವಿಟ್ ಮಾಡಿದ್ದಾರೆ.

Facebook Comments

Sri Raghav

Admin